ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ: ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ
Update: 2017-09-01 21:27 IST
ಉಡುಪಿ, ಸೆ.1: ಉಡುಪಿ ಶ್ರೀಕೃಷ್ಣ ಮಠದಲ್ಲಿ ಈ ತಿಂಗಳು ನಡೆಯುವ ಶ್ರೀಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ನಡೆಯುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಸೆ.2ರ ಶನಿವಾರ ಬೆಳಿಗ್ಗೆ 10 ಗಂಟೆಗೆ ರಾಜಾಂಗಣದಲ್ಲಿ ನಡೆಯಲಿದೆ.
ಪರ್ಯಾಯ ಪೇಜಾವರ ಮಠಾಧೀಶರಾದ ಶ್ರೀವಿಶ್ವೇಶತೀರ್ಥ ಶ್ರೀ ಹಾಗು ಶ್ರೀವಿಶ್ವಪ್ರಸನ್ನತೀರ್ಥರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ. ಸೆ.2ರಂದು ಭಕ್ತಿ ಸಂಗೀತ ಹಾಗು ಭಗವದ್ಗೀತೆ ಸ್ಪರ್ಧೆಗಳು ನಡೆಯಲಿದ್ದು ಸ್ಪರ್ಧಾಳುಗಳು ಮಠದ ಕಛೇರಿಯಲ್ಲಿ ಹೆಸರು ನೊಂದಾಯಿಸಬೇಕೆಂದು ಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.