ಪ್ರತಿಭಾ ಪುರಸ್ಕಾರಕ್ಕೆ ಹೆಸರು ನೋಂದಾಯಿಸಿಕೊಳ್ಳಲು ಕೋರಿಕೆ

Update: 2017-09-02 13:48 GMT

ಬೆಂಗಳೂರು, ಸೆ. 2: ಬಂಜಾರ ಸಮುದಾಯದ ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ, ಐಎಎಸ್ ಮತ್ತು ಕೆಎಎಸ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಸಾಧಕರಿಗೆ ಅಭಿನಂದನಾ ಸಮಾರಂಭವನ್ನು ಸೆ.10ರಂದು ರಾಯಚೂರಿನ ಕೃಷಿ ವಿವಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಹೀಗಾಗಿ ಬಂಜಾರ/ಲಂಬಾಣಿ ಸಮಾಜದ ಎಸೆಸೆಲ್ಸಿ, ಪಿಯುಸಿಯಲ್ಲಿ 2016-17ನೆ ಸಾಲಿನಲ್ಲಿ ಶೇ.85ಕ್ಕೂ ಹೆಚ್ಚಿನ ಅಂಕ ಗಳಿಸಿರುವ ವಿದ್ಯಾರ್ಥಿಗಳು, ಪೋಷಕರು ತಕ್ಷಣವೇ www.gorbanjara.in ನಲ್ಲಿ ಹೆಸರು ನೋಂದಣಿ ಮಾಡಿಕೊಳ್ಳಲು ಕೋರಲಾಗಿದೆ.
ಐಎಎಸ್ ಹಾಗೂ ಕೆಎಎಸ್ ಪರೀಕ್ಷೆ ಉತ್ತೀರ್ಣರಾಗಿರುವ ಸಮುದಾಯದ ಅಭ್ಯರ್ಥಿಗಳೂ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ-99000 26088, 98804 95195 ಅನ್ನು ಸಂಪರ್ಕಿಸಬಹುದು ಎಂದು ರಾಜ್ಯ ಬಂಜಾರ ನೌಕರರ ಸಾಂಸ್ಕೃತಿಕ ಮತ್ತು ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಡಾ.ಜಿ.ಕುಮಾರನಾಯ್ಕ ಪ್ರಕಟಣೆಯಲ್ಲಿ ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News