×
Ad

​ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ’ಅತ್ಯುತ್ತಮ ಸಹಕಾರ ಸಂಘ’ ಪ್ರಶಸ್ತಿ

Update: 2017-09-02 19:31 IST

ಪುತ್ತೂರು, ಸೆ. 2: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ 2016-17ರ ಸಾಲಿನ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿಗೆ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಆಯ್ಕೆಯಾಗಿದೆ. ಲೆಕ್ಕ ಪರಿಶೋಧನಾ ವರ್ಗೀಕರಣದಲ್ಲಿ ಸತತ 15 ವರ್ಷಗಳಿಂದ "ಎ" ಶ್ರೇಣಿ ಪಡೆಯುತ್ತಿರುವ ಸವಣೂರು ಪ್ರಾ.ಕೃ.ಪ.ಸ.ಸಂಘದ ಗಣನೀಯ ಪ್ರಗತಿ ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ.

ಸೆ.1ರಂದು ಮಂಗಳೂರಿನ ಡಿಸಿಸಿ ಬ್ಯಾಂಕ್‌ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರಕುಮಾರ್ ಅವರು ಸವಣೂರು ಸಹಕಾರಿ ಸಂಘದ ಅಧ್ಯಕ್ಷ ಉದಯ ರೈ ಮಾದೋಡಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಪಿ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ. ಜಯರಾಮ ರೈ, ಸವಣೂರು ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ಕರುಣಾಕರ್ ಪೂಜಾರಿ ಪಟ್ಟೆ, ನಿರ್ದೇಶಕರಾದ ಮಹಾಬಲ ಶೆಟ್ಟಿ ಕೊಮ್ಮಂಡ, ತಿಮ್ಮಪ್ಪ ಗೌಡ ಮುಂಡಾಳ, ತಾರಾನಾಥ ಕಾಯರ್ಗ, ಡಿಸಿಸಿ ಬ್ಯಾಂಕಿನ ಮೇಲ್ವಿಚಾರಕ ವಸಂತ ಎಸ್. ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News