ಸೆ.5ರಿಂದ 7ರ ತನಕ 'ಮಂಗಳೂರು ಚಲೋ' ಬೃಹತ್ ಬೈಕ್ ರ್ಯಾಲಿ : ತಮ್ಮೇಶ್‍ಗೌಡ
ಹಾಸನ,ಸೆ.2: ಹಿಂದೂ ಕಾರ್ಯಕರ್ತರ ಹತ್ಯೆ ಖಂಡಿಸಿ ಬಿಜೆಪಿ ಯುವ ಮೋರ್ಚಾದಿಂದ ಸೆಪ್ಟಂಬರ್ 5 ರಿಂದ 7ರ ವರೆಗೂ ಮಂಗಳೂರು ಚಲೋ ಬೃಹತ್ ಬೈಕ್ ರ್ಯಾಲಿಯನ್ನು ಹಮ್ಮಿಕೊಂಡಿರುವುದಾಗಿ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ತಮ್ಮೇಶ್‍ಗೌಡ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪಿ.ಎಫ್.ಐ., ಕೆ.ಎಫ್.ಡಿ. ಮತ್ತು ಎಸ್.ಡಿ.ಪಿ.ಐ ಸಂಘಟನೆಗಳನ್ನು ನಿಷೇಧಿಸುವಂತೆ ಹಾಗೂ ಹಿಂದೂ ಕಾರ್ಯಕರ್ತರ ಹತ್ಯೆ ಖಂಡಿಸಿ ಸೆಪ್ಟಂಬರ್ 5 ರಂದು ಬೆಂಗಳೂರು, ಹುಬ್ಬಳ್ಳಿ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಮೈಸೂರು ಜಿಲ್ಲೆಗಳಿಂದ ಸುಮಾರು 50 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಬೈಕ್‍ಗಳಲ್ಲಿ ರ್ಯಾಲಿ ನಡೆಸಿ ಸೆ.7 ರಂದು ಮಂಗಳೂರಿನಲ್ಲಿ ಡಿಸಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು.
ಸೆ.5 ರಂದು ಬೆಂಗಳೂರಿನಲ್ಲಿ ಮಾಜಿ ಸಚಿವ ಹಾಗೂ ಶಾಸಕ ಆರ್.ಅಶೋಕ್ ಬೈಕ್ ರ್ಯಾಲಿಗೆ ಚಾಲನೆ ನೀಡಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಬೈಕ್ ರ್ಯಾಲಿಯ ಕರಪತ್ರವನ್ನು ಬಿಡುಗಡೆಗೊಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಹೆಚ್.ಎನ್. ನಾಗೇಶ್, ಪ್ರಧಾನ ಕಾರ್ಯದರ್ಶಿ ಹರ್ಷಿತ್, ಮಹೇಶ್, ರಘು, ಲೋಕೇಶ್ ಇತರರು ಉಪಸ್ಥಿತರಿದ್ದರು.