×
Ad

ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸುವೆ:ಶ್ರೀನಿವಾಸ ಪ್ರಸಾದ್

Update: 2017-09-02 21:59 IST

ಮದ್ದೂರು, ಸೆ.2: ರಾಜ್ಯದಲ್ಲಿ ಬಿಜೆಪಿಯನ್ನು ಗೆಲ್ಲಿಸಿ ಅಧಿಕಾರಕ್ಕೆ ತರಲು ಸತತ ಪ್ರಯತ್ನ ಮಾಡುತ್ತಿದ್ದೇನೆ ಎಂದು ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ. 

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮೈಸೂರು, ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚು ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತಿದ್ದೇನೆ ಎಂದರು. 

ಸುಧೀರ್ಘ ರಾಜಕಾರಣದ ಅವಧಿಯಲ್ಲಿ ಎಲ್ಲಾ ಅಧಿಕಾರ ಅನುಭವಿಸಿದ್ದೇನೆ. ಮುಂಬರುವ ಚುನಾವಣೆಯಲ್ಲಿ  ಸ್ಪರ್ಧಿಸುವುದಿಲ್ಲ. ರಾಜ್ಯ ಕಾಂಗ್ರೆಸ್ ಸರಕಾರದ ವೈಫಲ್ಯಗಳ ಕುರಿತು ಜನಜಾಗೃತಿ ಮೂಡಿಸಲಾಗುವುದು ಎಂದು ಅವರು ಹೇಳಿದರು.

ನನ್ನ ಜೀವನದ ಏಳು ಬೀಳು ಕುರಿತು ಪುಸ್ತಕ ಬರೆಯಲಿದ್ದು, ಬರಹದ ಮೂಲಕ ಶೋಷಿತರ ಜಾಗೃತಿಯಲ್ಲಿ ಸಕ್ರಿಯವಾಗುತ್ತೇನೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News