ಜಾರ್ಖಂಡ್: ಬಾಲಕಿಯನ್ನು ಸಾಮೂಹಿಕ ಅತ್ಯಾಚಾರಗೈದು ಚರಂಡಿಗೆಸೆದರು….
Update: 2017-09-02 23:10 IST
ಜೆಮ್ಶೆದ್‌ಪುರ, ಸೆ. 2: ಹದಿನಾಲ್ಕು ವರ್ಷದ ಬಾಲಕಿಯನ್ನು ಸಾಮೂಹಿಕವಾಗಿ ಅತ್ಯಾಚಾರ ಎಸಗಿ ಚರಂಡಿಗೆ ಎಸೆದ ಘಟನೆ ಜೆಮ್ಶೆದ್‌ಪುರದ ಬಾಗ್ಬೇರಾದಲ್ಲಿ ಶುಕ್ರವಾರ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳಲ್ಲಿ ಓರ್ವನಾದ ಅಭಯ್ ಯಾದವ್‌ರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇತರ ಮೂವರು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿಯನ್ನು ಇಲ್ಲಿನ ಸದಾರ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಬಾಲಕಿ ಆರೋಗ್ಯವಾಗಿದ್ದಾಳೆ. ಆರೋಪಿಗಳನ್ನು ಪತ್ತೆ ಹಚ್ಚಲು ಆಕೆ ನೆರವಾಗಬಹುದು ಎಂಬ ಭರವಸೆ ನಮಗಿದೆ ಎಂದು ಪೊಲೀಸ್ ಉಪ ಅಧೀಕ್ಷಕ ವಿಮಲ್ ಕುಮಾರ್ ಹೇಳಿದ್ದಾರೆ.