×
Ad

ಸೆ.5 ರಂದು ‘ಸೌಹಾರ್ದತೆಗಾಗಿ ಕರ್ನಾಟಕ’ ಸಮಾವೇಶ

Update: 2017-09-02 23:12 IST

ಬೆಂಗಳೂರು, ಸೆ. 2: ಎಡ ಪಕ್ಷಗಳು, ದಲಿತ ಸಂಘಟನೆಗಳು ಹಾಗೂ ಎಲ್ಲ ಪ್ರಗತಿಪರ ಸಂಘಟನೆಗಳ ಸಹಯೋಗದೊಂದಿಗೆ ‘ಸೌಹಾರ್ದತೆಗಾಗಿ ಕರ್ನಾಟಕ’ ಎಂಬ ರಾಜ್ಯಮಟ್ಟದ ಸಮಾವೇಶವನ್ನು ಸೆ. 5 ರಂದು ನಗರದ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಳೆದ ಎರಡು ದಶಕದಲ್ಲಿ ಬಹುತ್ವಕ್ಕೆ, ಸೌಹಾರ್ದತೆಗೆ ದೊಡ್ಡ ಸವಾಲಾಗಿ ಬೆಳೆದಿರುವ ಕೋಮುವಾದ, ಮತೀಯವಾದದ ವಿರುದ್ಧ ಚರ್ಚಿಸುವ ತುರ್ತು ಅಗತ್ಯವಿದೆ. ಕರಾವಳಿಯನ್ನು ಕೋಮುವಾದದ ಪ್ರಯೋಗಶಾಲೆ ಮಾಡಿಕೊಳ್ಳಲಾಗಿದೆ. ಇಂತಹ ಸಂದರ್ಭದಲ್ಲಿ ನಾಡಿನ ಪ್ರಗತಿಪರ ಚಿಂತಕರು, ಚಳವಳಿಗಾರರು, ಸಂಘಟನೆಗಳು ಒಂದು ಕಡೆ ಸೇರಿ ಕೋಮುವಾದಕ್ಕೆ ಪ್ರತಿರೋಧ ಒಡ್ಡಬೇಕಿದೆ. ಈ ನಿಟ್ಟಿನಲ್ಲಿ ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಸಮಾವೇಶದಲ್ಲಿ ಸಿಪಿಎಂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ, ನಿಡುಮಾಮಿಡಿ ಮಠದ ಪೀಠಾಧ್ಯಕ್ಷ ವೀರಭದ್ರಚನ್ನಮಲ್ಲ ಸ್ವಾಮೀಜಿ, ಸಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಎಸ್.ಸುಧಾಕರರೆಡ್ಡಿ, ಹಿರಿಯ ಸಾಹಿತಿಗಳಾದ ಡಾ.ಬರಗೂರು ರಾಮಚಂದ್ರಪ್ಪ, ದೇವನೂರ ಮಹಾದೇವ, ದಲಿತ ಸಂಘಟನೆಗಳ ಸಮನ್ವಯ ಸಮಿತಿ ಸಂಚಾಲಕ ಎನ್.ಮುನಿಸ್ವಾಮಿ, ಚಿತ್ರನಟ ಚೇತನ್, ಸುನ್ನಿ ಜಮಾತ್ ಅಧ್ಯಕ್ಷ ಎ.ಅಮೀರ್ ಜಾನ್ ಖಾದ್ರಿ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News