ಪ್ರಮಾಣವಚನ ಸಮಾರಂಭಕ್ಕೆ ಶಿವಸೇನೆ ಬಹಿಷ್ಕಾರ

Update: 2017-09-03 04:54 GMT

ಹೊಸದಿಲ್ಲಿ, ಸೆ.3: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗಿದೆ. ಒಟ್ಟು 9 ನೂತನ ಸಚಿವರು ಸಂಪುಟ ಸೇರಲಿದ್ದಾರೆ.

ಇದೇ ವೇಳೆ, ಬಿಜೆಪಿಯ ಮಿತ್ರಪಕ್ಷ ಶಿವಸೇನಾ ಸಂಪುಟ ವಿಸ್ತರಣೆ ವೇಳೆ ತನ್ನ ಸಂಸದರಿಗೆ ಸ್ಥಾನ ನೀಡಲಿಲ್ಲ ಎಂಬ ಬೇಸರದಲ್ಲಿ ಪ್ರಮಾಣವಚನ ಸಮಾರಂಭವನ್ನು ಬಹಿಷ್ಕರಿಸಲು ನಿರ್ಧರಿಸಿದೆ.

ಪ್ರಮಾಣವಚನಕ್ಕೂ ಮೊದಲು 9 ನಿಯೋಜಿತ ಸಚಿವರ ಜೊತೆ ಪ್ರಧಾನಿ ತಮ್ಮ ಅಧಿಕೃತ ನಿವಾಸದಲ್ಲಿ ಬೆಳಗ್ಗಿನ ಉಪಹಾರ ಮಾಡಿದರು.

 ಬೆಳಗ್ಗೆ 10:30ಕ್ಕೆ ರಾಷ್ಟ್ರಪತಿ ಭವನದ ಅಶೋಕಾ ಹಾಲ್‌ನಲ್ಲ್ಲಿ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ನಿಯೋಜಿತ ಸಚಿವರು ರಾಷ್ಟ್ರಪತಿ ಭವನಕ್ಕೆ ತೆರಳಿದ್ದಾರೆ. ಮೋದಿ ನೇತೃತ್ವದ ಸರಕಾರ ಮೂರನೆ ಬಾರಿ ಸಂಪುಟ ವಿಸ್ತರಣೆ ಮಾಡುತ್ತಿದ್ದು, ನಿಯೋಜಿತ ಸಚಿವರಿಗೆ ರಾಜ್ಯ ಸಚಿವ ಸ್ಥಾನ ನೀಡಲಾಗುತ್ತಿದ್ದು, ಪಿಯೂಷ್ ಚಾವ್ಲಾ, ಧರ್ಮೇಂದ್ರ ಪ್ರಧಾನ್, ಮುಖ್ತಾರ್ ಅಬ್ಬಾಸ್ ನಖ್ವಿ ಹಾಗೂ ನಿರ್ಮಲಾ ಸೀತಾರಾಮನ್‌ಗೆ ಭಡ್ತಿ ಸಿಗುವ ಸಾಧ್ಯತೆಯಿದೆ.

ಕರ್ನಾಟಕದ ಸಂಸದ ಅನಂತಕುಮಾರ ಹೆಗಡೆಗೆ ಸಂಪುಟದಲ್ಲಿ ಸ್ಥಾನ ನೀಡಲಾಗಿದ್ದು, ವೈದ್ಯರ ಮೇಲೆ ಹಲ್ಲೆ ನಡೆಸಿದ ಆರೋಪಿ ಹೆಗಡೆಗೆ ಸಂಪುಟದಲ್ಲಿ ಸ್ಥಾನ ನೀಡುವುತ್ತಿರುವುದಕ್ಕೆ ಕಾಂಗ್ರೆಸ್ ಬಲವಾಗಿ ಟೀಕಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News