ನನ್ನ, ಸಿಎಂ ನಡುವೆ ಭಿನ್ನಾಭಿಪ್ರಾಯವಿಲ್ಲ:ಪರಮೇಶ್ವರ್ ಸ್ಪಷ್ಟನೆ

Update: 2017-09-03 07:05 GMT

ಬೆಂಗಳೂರು, ಸೆ.2: ‘‘ಜ್ವರ ಇದ್ದ ಕಾರಣ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ಹಾಜರಾಗಿರಲಿಲ್ಲ. ನನ್ನ ಹಾಗೂ ಸಿಎಂ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಅವರೊಂದಿಗೆ ಹಲವು ವರ್ಷಗಳ ಕಾಲ ಕೆಲಸಮಾಡಿದ್ದೇನೆ. ಗೃಹ ಸಚಿವನಾಗಿಯೂ ಕಾರ್ಯನಿರ್ವಹಿಸಿದ್ದೇನೆ. ಆ ಸಂದರ್ಭದಲ್ಲಿ ನಮ್ಮಬ್ಬರಲ್ಲಿ ಮನಸ್ತಾಪ ಉಂಟಾಗಿರಲಿಲ್ಲ’’ ಎಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.

‘‘ಸಂಪುಟ ವಿಸ್ತರಣೆ ಸಂದರ್ಭದಲ್ಲಿ ನಾನು ಹಾಗೂ ಸಿಎಂ ಬೇರೆ ಬೇರೆ ಹೆಸರು ಸೂಚಿಸಿರಬಹುದು. ಆಬಳಿಕ ಇಬ್ಬರು ಒಟ್ಟಿಗೆ ಕುಳಿತು ಒಮ್ಮತದ ನಿರ್ಧಾರಕ್ಕೆ ಬಂದಿದ್ದೇವೆ. ನನ್ನ ಹಾಗೂ ಸಿಎಂ ನಡುವೆ ಭಿನ್ನಾಭಿಪ್ರಾಯವಿದೆ ಎಂದು ಯಾರೋ ವಿರೋಧ ಪಕ್ಷದವರು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಈ ಸುದ್ದಿಯಲ್ಲಿ ಸತ್ಯಾಂಶವಿಲ್ಲ’’ ಎಂದು ಪರಮೇಶ್ವರ್ ಹೇಳಿದ್ದಾರೆ.

 ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿ ಸಿಎಂ ಹಾಗೂ ಪರಮೇಶ್ವರ್ ನಡುವೆ ಭಿನ್ನಾಭಿಪ್ರಾಯ ಉಂಟಾಗಿದ್ದು, ಇಬ್ಬರ ನಡುವೆ ಶೀತಲ ಸಮರ ಏರ್ಪಟ್ಟಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು.

‘‘ನಮ್ಮಿಬ್ಬರ ನಡುವೆ ಕೋಲ್ಡ್ ಅಥವಾ ಹಾಟ್ ವಾರ್ ಇಲ್ಲ. ಇದೆಲ್ಲವೂ ಊಹಾಪೋಹ’’ಎಂದು ಪರಮೇಶ್ವರ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News