×
Ad

ಸೆ.6 ರಂದು ಪ್ರೊ.ಇಜಾಝುದ್ದೀನ್‌ಗೆ ನುಡಿ ನಮನ

Update: 2017-09-03 17:41 IST

ಬೆಂಗಳೂರು, ಸೆ.3: ಅಖಿಲ ಕರ್ನಾಟಕ ಮಹಮದೀಯರ ಕನ್ನಡ ವೇದಿಕೆಯು ಕನ್ನಡ ಶ್ರೀಸಾಮಾನ್ಯರ ಕೂಟದ ಸಹಯೋಗದೊಲ್ಲಿ ಸರ್ವಧರ್ಮ ಸಮನ್ವಯಕಾರ, ಸೌಹಾರ್ದ ಶಿಲ್ಪಿ ಪ್ರೊ.ಇಜಾಝುದ್ದೀನ್‌ ಅವರಿಗೆ ಸೆ.6ರಂದು ಸಂಜೆ 5.30ಕ್ಕೆ ನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷನ್ಮಂದಿರದಲ್ಲಿ ‘ನುಡಿ ನಮನ’ ಕಾರ್ಯಕ್ರಮ ವನ್ನು ಹಮ್ಮಿಕೊಂಡಿದೆ.

ಕಾರ್ಯಕ್ರಮದಲ್ಲಿ ಬೇಲಿಮಠದ ಶ್ರೀ ಶಿವರುದ್ರಸ್ವಾಮಿ, ನಗರಾಭಿವೃದ್ಧಿ ಸಚಿವ ಆರ್.ರೋಶನ್‌ಬೇಗ್, ಶಿಕ್ಷಣ ತಜ್ಞ ಪ್ರೊ.ಕೆ.ಇ.ರಾಧಾಕೃಷ್ಣ, ಶಾಸಕ ಡಾ.ಸಿ.ಎನ್. ಅಶ್ವಥನಾರಾಯಣ, ತುಮಕೂರು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ.ಸಿ.ಶಿವಮೂರ್ತಿ, ಕನ್ನಡ ಶ್ರೀಸಾಮಾನ್ಯರ ಕೂಟದ ಅಧ್ಯಕ್ಷ ಶ್ರ.ದೇ.ಪಾರ್ಶ್ವನಾಥ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ ಎಂದು ಅಖಿಲ ಕರ್ನಾಟಕ ಮಹಮದೀಯರ ಕನ್ನಡ ವೇದಿಕೆಯ ಅಧ್ಯಕ್ಷ ಸಮೀವುಲ್ಲಾಖಾನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News