19 ವರ್ಷಗಳಿಂದ ಸಿಎಂ ಆಗಿರುವವರು ಮತ್ತೆ ಮುಖ್ಯಮಂತ್ರಿ ಅಭ್ಯರ್ಥಿ !
ಅಗರ್ತಲ, ಸೆ.3: ತ್ರಿಪುರಾದ ಆಡಳಿತ ಪಕ್ಷ ಸಿಪಿಎಂ 2018ರ ಫೆಬ್ರವರಿಯಲ್ಲಿ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ 19 ವರ್ಷಗಳಿಂದ ಮುಖ್ಯಮಂತ್ರಿಯಾಗಿರುವ ಮಾಣಿಕ್ ಸರ್ಕಾರ್ ಅವರನ್ನು ಮತ್ತೊಮ್ಮೆ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ನಿಲ್ಲಿಸಲು ನಿರ್ಧರಿಸಿದೆ.
68 ವರ್ಷದ ಸರ್ಕಾರ್ 19 ವರ್ಷಗಳಿಂದ ತ್ರಿಪುರಾದ ಮುಖ್ಯಮಂತ್ರಿಯಾಗಿದ್ದು, ಸಿಪಿಎಂ ಪಾಲಿಟ್ ಬ್ಯೂರೋದ ಸದಸ್ಯರಾಗಿದ್ದಾರೆ,
“ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಗೆ ಎಡಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಮಾಣಿಕ್ ಸರ್ಕಾರ್ ಸ್ಪರ್ಧಿಸಲಿದ್ದು, ಚುನಾವಣೆಯಲ್ಲಿ ಗೆದ್ದು ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿದ್ದಾರೆ” ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಬಿಜಾನ್ ಧರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸರ್ಕಾರ್ ರ ಕಳಂಕ ರಹಿತ ಇಮೇಜ್, ದಕ್ಷತೆ ಹಾಗೂ ಪ್ರದರ್ಶನದಿಂದ ಮತ್ತೊಮ್ಮೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಎಡಪಕ್ಷ ಜಯಿಸಲಿದೆ ಎನ್ನುವ ಚರ್ಚೆಗಳು ರಾಜಕೀಯ ವಲಯದಲ್ಲಿ ಆರಂಭವಾಗಿದೆ.
ಈ ಹಿಂದಿನ ಚುನಾವಣೆಗ ಹೋಲಿಸಿದರೆ, ಚುನಾವಣೆಗೆ ಬಹಳ ಮೊದಲೇ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿರುವುದು ರಾಜಕೀಯ ತಂತ್ರ ಎನ್ನಲಾಗುತ್ತಿದೆ.