ಮಂಡ್ಯ: ಕುಡಿಯುವ ನೀರಿನ ಕಾಮಗಾರಿಗೆ ಚಾಲನೆ
Update: 2017-09-03 21:56 IST
ಮಂಡ್ಯ, ಸೆ.2: ತಾಲೂಕಿನ ಹೊಳಲು ಜಿಲ್ಲಾ ಪಂಚಾಯತ್ ಕ್ಷೇತ್ರದ ಬಿ. ಹೊಸೂರು ಗ್ರಾಪಂ ವ್ಯಾಪ್ತಿಯ ಕೆ.ಗೌಡಗೆರೆ ಗ್ರಾಮದಲ್ಲಿ 7 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ಕುಡಿಯುವ ನೀರು ಸರಬರಾಜು ಯೋಜನೆಗೆ ಜಿಪಂ ಸದಸ್ಯೆ ಅನುಪಮಾ ಯೋಗೇಶ್ ರವಿವಾರ ಗುದ್ದಲಿ ಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಜಿಲ್ಲಾ ಪಂಚಾಯತ್ ಅನುದಾನದಲ್ಲಿ ಕುಡಿಯುವ ನೀರಿನ ಯೋಜನೆ ರೂಪಿಸಲಾಗುತ್ತಿದ್ದು, ಕುಡಿಯುವ ನೀರಿಗೆ ತೊಂದರೆಯಾಗುವುದನ್ನು ತಪ್ಪಿಸುವ ಉದ್ದೇಶದಿಂದ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷ ಪಟೇಲ್ ರಾಜಶೇಖರ್, ಸದಸ್ಯರಾದ ಸತೀಶ್, ಯೋಗೇಶ್, ಪ್ರತಾಪ್, ಮುಖಂಡರಾದ ಕಾಂತರಾಜು, ಶ್ರೀಧರ್, ಶಂಕರ್ ಇತರರಿದ್ದರು.