ಅಂಬಾಲ ಜೈಲಿನಲ್ಲಿ ಬಾಬಾ ಗುರ್ಮೀತ್ ಬೆಂಬಲಿಗ ಆತ್ಮಹತ್ಯೆಗೆ ಶರಣು
Update: 2017-09-03 22:56 IST
ಅಂಬಾಲ, ಸೆ.3: ಪಂಚಕುಲದಲ್ಲಿ ಆಗಸ್ಟ್ 25ರಂದು ಸಂಭವಿಸಿದ ಹಿಂಸಾಚಾರಕ್ಕೆ ಸಂಬಂಧಿಸಿ ಬಂಧಿತ ಡೇರಾ ಸಚ್ಚಾ ಸೌದದ ಬೆಂಬಲಿಗ ಅಂಬಾಲ ಕೇಂದ್ರ ಕಾರಾಗೃಹದ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತಪಟ್ಟ ವ್ಯಕ್ತಿಯನ್ನು ಉತ್ತರಪ್ರದೇಶ ಸರ್ಸಾವದ ನಿವಾಸಿ ರವೀಂದರ್ (28) ಎಂದು ಗುರುತಿಸಲಾಗಿದೆ.
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಬಾಬಾ ಗುರ್ಮೀತ್‌ನನ್ನು ಅಪರಾಧಿ ಎಂದು ಘೋಷಿಸಲಾಗಿತ್ತು. ಬಳಿಕ ಆಗಸ್ಟ್ 25ರಂದು ಪಂಚಕುಲದಲ್ಲಿ ಹಿಂಸಾಚಾರ ಆರಂಭವಾಗಿತ್ತು.
ಅನಂತರ ಬಾಬಾ ಗುರ್ಮೀತ್‌ಗೆ ವಿಶೇಷ ಸಿಬಿಐ ನ್ಯಾಯಾಲಯ 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿತ್ತು.
ಹಿಂಸಾಚಾರಕ್ಕೆ ಸಂಬಂಧಿಸಿ ರವೀಂದರ್ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನದ ಹಿನ್ನೆಲೆಯಲ್ಲಿ ಅಂಬಾಲ ಜೈಲಿನಲ್ಲಿ ಇರಿಸಲಾಗಿತ್ತು. ರವೀಂದರ್ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಗಮನಿಸಿ ಸಹ ಖೈದಿ ಜೈಲಿನ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.