×
Ad

ರೈಲಿನಡಿಗೆ ಬಿದ್ದು ಪ್ರೇಮಿಗಳು ಆತ್ಮಹತ್ಯೆ

Update: 2017-09-04 21:27 IST
ಸಾಂದರ್ಭಿಕ ಚಿತ್ರ

ದಾವಣಗೆರೆ,ಸೆ.4: ಪ್ರೇಮಿಗಳಿಬ್ಬರು ಚಲಿಸುತ್ತಿದ್ದ ರೈಲಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಬಾಡಾ ಕ್ರಾಸ್‍ನ ರೈಲ್ವೆ ಹಳಿಗಳ ಬಳಿ ಸೋಮವಾರ ಬೆಳಗ್ಗೆ ನಡೆದಿದೆ.

ಸುಮಾರು 20 ವರ್ಷದ ಯುವಕ, 17 ವರ್ಷದ ಅಪ್ರಾಪ್ತ ಯುವತಿ ಸಾವಿಗೆ ಶರಣಾಗಿದ್ದಾರೆ. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದು, ಹೆತ್ತವರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಗುರುತು ಪತ್ತೆಯಾಗದಂತಹ ಸ್ಥಿತಿಯಲ್ಲಿ ಇಬ್ಬರ ಶವಗಳೂ ಪತ್ತೆಯಾಗಿದೆ. ಶವಗಳನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ಕಳಿಸಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.

ಈ ಕುರಿತು ದಾವಣಗೆರೆ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News