ಬಿಎಎಂಎಸ್ ಪದವಿ ವಿದ್ಯಾರ್ಥಿಗಳಿಗೆ ಇಂಡಕ್ಷನ್ ಕಾರ್ಯಕ್ರಮ
ಉಡುಪಿ, ಸೆ.4: ಕುತ್ಪಾಡಿ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನ 2017-18ನೆ ಸಾಲಿನಲ್ಲಿ ಆಯುರ್ವೇದ ಅಧ್ಯಯನಕ್ಕೆ ಪ್ರವೇಶ ಪಡೆದ ಪ್ರಥಮ ವರ್ಷದ ಬಿಎಎಂಎಸ್ ಪದವಿ ವಿದ್ಯಾರ್ಥಿಗಳಿಗೆ ಇಂಡಕ್ಷನ್ ಕಾರ್ಯಕ್ರಮವನ್ನು ಸೋಮವಾರ ಆಯೋಜಿಸಲಾಗಿತ್ತು.
ಆರು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಆಯುರ್ವೇದದ ಹಾಗೂ ಅದರ ವಿಷಯಗಳ ಬಗ್ಗೆ ಸವಿವರವಾಗಿ ನೂತನ ವಿದ್ಯಾರ್ಥಿ ಗಳಿಗೆ ತಿಳಿಸಲಿದ್ದು, ಇದರಿಂದ ವಿದ್ಯಾರ್ಥಿಗಳು ಆಯುರ್ವೇದವನ್ನು ಕಲಿಯುವ ವಿಶೇಷ ತರಬೇತಿ ಪಡೆಯಲಿದ್ದಾರೆ.
ಪ್ರಾಂಶುಪಾಲ ಡಾ.ಶ್ರೀಕಾಂತ್ ಯು. ಅಧ್ಯಕ್ಷತೆ ವಹಿಸಿದ್ದರು. ಸ್ನಾತಕೋತ್ತರ ಡೀನ್ ಡಾ.ಬಿ.ಆರ್. ದೊಡ್ಡಮನಿ ಉಪಸ್ಥಿತರಿದ್ದರು. ಶಲ್ಯತಂತ್ರ ವಿಭಾಗ ಮುಖ್ಯಸ್ಥ ಡಾ.ಕೆ.ಆರ್.ರಾಮಚಂದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು.
ವಿದ್ಯಾರ್ಥಿ ಕ್ಷೇಮಾಭಿವೃದ್ಧಿಯ ಸಹಾಯಕ ಡೀನ್ ಡಾ.ಮಮತಾ ಕೆ.ವಿ. ಸ್ವಾಗತಿಸಿದರು. ದ್ರವ್ಯಗುಣ ವಿಭಾಗದ ಸಹಪ್ರಾಧ್ಯಾಪಕಿ ಡಾ.ಚೈತ್ರಾ ಎಸ್. ಹೆಬ್ಬಾರ್ ವಂದಿಸಿದರು. ಸಂಹಿತ ಸಿದ್ಧಾಂತ ವಿಭಾಗದ ಪ್ರಾಧ್ಯಾಪಕ ಡಾ. ಶ್ರೀಕಾಂತ್ ಪಿ.ಎಚ್. ಕಾರ್ಯಕ್ರಮ ಸಂಯೋಜಿಸಿದರು.