×
Ad

ಬಿಜೆಪಿಯ 'ದಿಲ್ಲಿ ಚಲೋ'ಗೆ ನಾವು ಕೈಜೋಡಿಸುತ್ತೇವೆ: ಸಿಎಂ ಸಿದ್ದರಾಮಯ್ಯ

Update: 2017-09-05 13:20 IST

 ಬೆಂಗಳೂರು, ಸೆ. 5: ಬಿಜೆಪಿಯವರು  ಮಂಗಳೂರು ಚಲೋ ಮಾಡುವುದನ್ನು ಬಿಟ್ಟು ರೈತರ ಸಾಲ ಮನ್ನಾ ಆಗ್ರಹಿಸಿ ದಿಲ್ಲಿ ಚಲೋ ಕಾರ್ಯಕ್ರಮ ಕೈಗೊಳ್ಳಲಿ. ನಾವು ಅವರೊಂದಿಗೆ ಕೈ ಜೋಡಿಸುತ್ತೇವೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

 ಬಿಜೆಪಿ ಯುವ ಮೋರ್ಚಾದ ಮಂಗಳೂರು ಚಲೋ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಅವರು " ರ‍್ಯಾಲಿ  ಹೆಸರಲ್ಲಿ ಬಿಜೆಪಿ  ಶಾಂತಿ ಕದಡುವ ಪ್ರಯತ್ನ ಮಾಡುತ್ತಿದೆ''  ಎಂದರು.

 ಹಿಂದೆ  ಬಿಜೆಪಿ ಸರಕಾರದ  ಅವಧಿಯಲ್ಲಿ ನಡೆದಿದ್ದ ಅಕ್ರಮ ಗಣಿಗಾರಿಕೆಯನ್ನು ಖಂಡಿಸಿ ಬಳ್ಳಾರಿಗೆ ಕಾಂಗ್ರೆಸ್ ಪಾದಯಾತ್ರೆ ಮಾಡಿದ್ದೆವು ಎಂದು ಸಿದ್ದರಾಮಯ್ಯ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News