ಚಿಕ್ಕಮಗಳೂರು: ಸೆ.7 ರಂದು ತಾಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟನಾ ಸಮಾರಂಭ
ಚಿಕ್ಕಮಗಳೂರು, ಸೆ.5: ಜಿಪಂ, ತಾಪಂ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ತಾಲೂಕು ಪ್ರೌಢಶಾಲೆಗಳ ದೈಹಿಕ ಶಿಕ್ಷಕರ ಸಂಘ, ಆಶ್ರಯದಲ್ಲಿ ಚಿಕ್ಕಮಗಳೂರು ತಾಲೂಕು ಮಟ್ಟದ ಪ್ರೌಢ ಶಾಲೆಗಳ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವು ಸೆ.7 ರಂದು ಬೆಳಗ್ಗೆ 9ಕ್ಕೆ ನಗರದ ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ, ಜ್ಯೋತಿನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ರೋಷನ್ ಬೇಗ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಸಿ.ಟಿ ರವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ಸಭಾಪತಿ ಡಿ.ಹೆಚ್. ಶಂಕರಮೂರ್ತಿ, ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಆರತಿ ಕೃಷ್ಣ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಗಣೇಶ್ ಕಾರ್ಣಿಕ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಬಿ.ಎಸ್. ಚೈತ್ರಶ್ರೀ ಮಾಲತೇಶ್, ಸಂಸದೆ ಶೋಭಾ ಕರಂದ್ಲಾಜೆ, ರಾಜ್ಯ ಸಭಾ ಸದಸ್ಯ ಜೈರಾಮ್ ರಮೇಶ್ ಪಾಲ್ಗೊಳ್ಳಲಿದ್ದಾರೆ.
ಶಾಸಕರುಗಳಾದ ಡಿ.ಎನ್.ಜೀವರಾಜ್, ಬಿ.ಬಿ.ನಿಂಗಯ್ಯ, ಎಂಎಲ್‍ಸಿಗಳಾದ ಮೋಟಮ್ಮ, ಎಂ.ಕೆ.ಪ್ರಾಣೇಶ್, ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ನಿಗಮದ ಅಧ್ಯಕ್ಷ ಎ.ಎನ್. ಮಹೇಶ್, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಹೆಚ್.ಪಿ.ಮೋಹನ್, ನಗರಸಭೆ ಅಧ್ಯಕ್ಷೆ ಕವಿತಾಶೇಖರ್, ಸಿಡಿಎ ಅಧ್ಯಕ್ಷ ಸೈಯ್ಯದ್ ಹನೀಫ್, ತಾಪಂ ಅಧ್ಯಕ್ಷ ಈ.ಆರ್.ಮಹೇಶ್, ಜಿಪಂ ಉಪಾಧ್ಯಕ್ಷ ರಾಮಸ್ವಾಮಿಶೆಟ್ಟಿ ಗದ್ದೆ, ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷ ಶಾಮಣ್ಣ ಬಣಕಲ್, ಜಿಪಂ ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷ ರವೀಂದ್ರ ಬೆಳವಾಡಿ, ಜಿಪಂ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿಯ ಅಧ್ಯಕ್ಷ ಕವಿತಾ ಲಿಂಗರಾಜು, ತಾಪಂ ಉಪಾಧ್ಯಕ್ಷ ಸುರೇಶ್, ಜಿ.ಪಂ.ಸದಸ್ಯರುಗಳಾದ ಬಿ.ಜಿ.ಸೋಮಶೇಖರ್, ಜಸಿಂತ ಅನಿಲ್ ಕುಮಾರ್ ಆರ್ ಮತ್ತಿತರರು ಭಾಗವಹಿಸಲ್ಲಿದ್ದಾರೆ.