×
Ad

ಬೆಂಗಳೂರು: ನೌಕರ ಆತ್ಮಹತ್ಯೆ

Update: 2017-09-05 22:04 IST

ಬೆಂಗಳೂರು, ಸೆ.5: ಖಾಸಗಿ ಕಂಪೆನಿಯ ನೌಕರರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಸಂಪಿಗೆ ಲೇಔಟ್‌ನ 4ನೆ ಮುಖ್ಯರಸ್ತೆಯ ಬಸವರಾಜು(22) ಆತ್ಮಹತ್ಯೆ ಮಾಡಿಕೊಂಡಿರುವ ನೌಕರ ಎಂದು ಪೊಲೀಸರು ತಿಳಿಸಿದ್ದಾರೆ.

ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಬಸವರಾಜು ರಾತ್ರಿ ಮನೆಗೆ ಬಂದು ಫ್ಯಾನಿನ ಹುಕ್ಕಿಗೆ ಹಗ್ಗದಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆಗೆ ಕಾರಣ ತಿಳಿದುಬಂದಿಲ್ಲ.

ಪ್ರಕರಣ ಸಂಬಂಧ ವಿಜಯನಗರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News