ಗೌರಿ ಲಂಕೇಶ್ ಹತ್ಯೆಗೆ ಖಂಡನೆ
Update: 2017-09-05 22:18 IST
ಮಂಗಳೂರು, ಸೆ.5: ಚಿಂತಕಿ, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಜಿಲ್ಲೆಯ ವಿವಿಧ ಸಂಘಟನೆಗಳ ಪ್ರಮುಖರು ಖಂಡಿಸಿದ್ದಾರೆ.
ಮತೀಯವಾದಿ ಶಕ್ತಿಗಳಿಗೆ ಸಿಂಹಸ್ವಪ್ನವಾಗಿದ್ದ ಗೌರಿ ಲಂಕೇಶ್‌ರ ಹತ್ಯೆಯ ಖಂಡನೀಯ. ಇದರಿಂದ ನಾಡಿನ ಚಿಂತಕಿಯೊಬ್ಬರನ್ನು ಕಳೆದುಕೊಂಡಂತಾಗಿದೆ. ರಾಜ್ಯ ಸರಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ರಾಜ್ಯ ಹಜ್ ಕಮಿಟಿಯ ಸದಸ್ಯ ಕೆ.ಎಂ. ಅಬೂಬಕರ್ ಸಿದ್ದೀಕ್ ಮೋಂಟುಗೋಳಿ, ಕರಾವಳಿ ವಲಯ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಯು.ಬಿ. ಸಲೀಂ, ಮಂಗಳೂರು ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಅಲಿ ಹಸನ್, ಸಿಪಿಐ ದ.ಕ.ಜಿಲ್ಲಾ ಕಾರ್ಯದರ್ಶಿ ವಿ. ಕುಕ್ಯಾನ್, ಲೇಖಕ ಇಸ್ಮತ್ ಪಜೀರ್ ಒತ್ತಾಯಿಸಿದ್ದಾರೆ.