×
Ad

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಖಂಡನೆ: ಮನವಿ

Update: 2017-09-06 19:41 IST

ಬೆಳ್ತಂಗಡಿ,ಸೆ.6: ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯನ್ನು ಖಂಡಿಸಿ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ತೀವ್ರವಾಗಿ 
ಖಂಡಿಸಿದೆ. ಬುಧವಾರ ಸಂಘದ ಅಧ್ಯಕ್ಷ ಮನೋಹರ ಬಳಂಜ ಅವರ ಅಧ್ಯಕ್ಷತೆಯಲ್ಲಿ ತುರ್ತು ಸಭೆ ನಡೆಸಿ ಖಂಡನಾ ನಿರ್ಣಯವನ್ನು ಅಂಗೀಕರಿಸಿ ಬಳಿಕ ತಹಸೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ, ಪೋಲಿಸ್ ಇಲಾಖೆ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿಯನ್ನು ಸಂಘದ ಸದಸ್ಯರು ಸಲ್ಲಿಸಿದರು. ಸಭೆಯಲ್ಲಿ ಪತ್ರಕರ್ತ ಅಶ್ರಫ್ ಆಲಿ ಕುಂಞ ನುಡಿ ನಮನ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News