×
Ad

ಗೌರಿ ಲಂಕೇಶ್ ಹತ್ಯೆ ಖಂಡಿಸಿ ವಿವಿಧೆಡೆ ಪ್ರತಿಭಟನೆ

Update: 2017-09-06 20:39 IST

ಬಂಟ್ವಾಳ, ಸೆ. 6: ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ತಾಲೂಕು ವತಿಯಿಂದ ವಿಟ್ಲದ ನಾಲ್ಕು ಮಾರ್ಗ ಜಂಕ್ಷನ್‍ನಲ್ಲಿ ಬುಧವಾರ ಪ್ರತಿಭಟನೆ ನಡೆಯಿತು. 
ಈ ಸಂದರ್ಭದಲ್ಲಿ ಬಿ.ಸಿ.ರೋಡ್ ವಳಯ ಅಧ್ಯಕ್ಷ ಇಮ್ತಿಯಾಝ್ ತುಂಬೆ, ಪಿಎಫ್‍ಐ ಬಂಟ್ವಾಳ ತಾಲೂಕು ಇಝಾಝ್ ಅಹ್ಮದ್, ಪ್ರಮುಖರಾದ ಶಾಕೀರ್ ಅಳಕೆಮಜಲು, ಖಲಂದರ್ ಪರ್ತಿಪ್ಪಾಡಿ, ಅಝೀಝ್ ಕಡಂಬು, ಖಮರುದ್ದೀನ್ ಪುಣಚ್ಚ, ಅದ್ದುಚ್ಚ ಮೊದಲಾದವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.  
--------------------- 

ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವತಿಯಿಂದ ಪ್ರತಿಭಟನೆ
ಪತ್ರಕರ್ತೆ, ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಸಮಿತಿ ವತಿಯಿಂದ ಬಿ.ಸಿ.ರೋಡ್ ಕೈಕಂಬದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು. 

ಈ ಸಂದರ್ಭದಲ್ಲಿ ಎಸ್‍ಡಿಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹನೀಫ್ ಖಾನ್ ಕೋಡಾಜೆ, ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಶಾಹುಲ್ ಎಸ್.ಎಚ್., ವುಮೆನ್ಸ್ ಇಂಡಿಯಾ ಮೂಮೆಂಟ್ ನಾಯಕಿ ಶಾಹಿದಾ ತಸ್ಲೀಮ್, ಬಂಟ್ವಾಳ ಪುರಸಭಾ ಸದಸ್ಯ ಮುನೀಶ್ ಅಲಿ, ಪ್ರಮುಖರಾದ ಇಸ್ಮಾಯೀಲ್ ಬಾವ, ಯೂಸುಫ್ ಆಲಡ್ಕ ಉಪಸ್ಥಿತರಿದ್ದರು. 
------------------------- 

ಪಿಎಫ್‍ಐ ಫರಂಗಿಪೇಟೆ ವತಿಯಿಂದ ಪ್ರತಿಭಟನೆ 
ಬಂಟ್ವಾಳ, ಸೆ. 6: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ತಾಲೂಕು ವತಿಯಿಂದ ಫರಂಗಿಪೇಟೆಯಲ್ಲಿ ಬುಧವಾರ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಪಿಎಫ್‍ಐ ಬಂಟ್ವಾಳ ತಾಲೂಕು ಅಧ್ಯಕ್ಷ ಸಲೀಂ ಫರಂಗಿಪೇಟೆ, ಪ್ರಮುಖರಾದ ಅಬೂಬಕ್ಕರ್ ಸಿದ್ದೀಕ್ ಪನಾಮ, ಸಿಎಫ್‍ಐ ನಾಯಕ ರಿಯಾಝ್ ಕಡಂಬು ಮೊದಲಾದವರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News