ಬಂಟ್ವಾಳ : ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟ
ಬಂಟ್ವಾಳ, ಸೆ. 6: ಬಂಟ್ವಾಳ ತೌಹೀದ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟವು ಜರುಗಿತು.
ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಶಿವಪ್ರಕಾಶ್ ಪಂದ್ಯಾಟವನ್ನು ಉದ್ಘಾಟಿಸಿ ಶುಭಕೋರಿದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ರತ್ನಾವತಿ ಪ್ರಸ್ತಾವಿಕ ನುಡಿಗಳನ್ನಾಡಿದರು. ಕಬಡ್ಡಿಯಲ್ಲಿ ಮಕ್ಕಳು ಜಿಲ್ಲಾ, ರಾಜ್ಯ, ರಾಷ್ಟ್ರಮಟ್ಟದಲ್ಲಿ ಸ್ಪರ್ಧಿಸುವಂತಾಗಲಿ ಎಂದು ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್ ಹಾರೈಸಿದರು.
ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕ ಹಾಜಿ ಮುಹಮ್ಮದಾಲಿ, ಕೋಶಾಧಿಕಾರಿಯಾದ ಹಾಜಿ ಬಿ.ಎಚ್.ಬಿ.ಸಾದಿಕ್, ಆಡಳಿತ ಮಂಡಳಿ ಸದಸ್ಯರಾದ ಇಸ್ಮಾಯೀಲ್, ಪಿ.ಟಿ.ಎ ಅಧ್ಯಕ್ಷ ಶಬೀರ್ ಅಹ್ಮದ್, ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಮಮತ ಸುವರ್ಣ, ವಲಯದ ವಿವಿಧ ಪ್ರೌಢಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರು, ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಮೆಟಿಲ್ಡಾ ಡಿ'ಕೋಸ್ತಾ ಸ್ವಾಗತಿಸಿ, ಸಹ ಶಿಕ್ಷಕಿ ಮಮತ ವಂದಿಸಿದರು. ಶಾಲಾ ದೈಹಿಕ ಶಿಕ್ಷಕರಾದ ಪ್ರಕಾಶ್ ಎಸ್. ಕಾರ್ಯಕ್ರಮ ನಿರೂಪಿಸಿದರು.