×
Ad

ದ.ಕ.: ಸೆ.8ರವರೆಗೆ ನಿರ್ಬಂಧಕಾಜ್ಞೆ

Update: 2017-09-06 21:19 IST

ಮಂಗಳೂರು ಸೆ.6: ದ.ಕ. ಜಿಲ್ಲೆಯ ಸುಳ್ಯ, ಪುತ್ತೂರು, ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕುಗಳಲ್ಲಿ ಸೆ.6ರ ಬೆಳಗ್ಗೆ 6 ಗಂಟೆಯಿಂದ ಸೆ.8ರ ಬೆಳಗ್ಗೆ 6 ಗಂಟೆಯವರೆಗೆ ಕರ್ನಾಟಕ ಪೋಲಿಸ್ ಕಾಯ್ದೆಯ ಕಲಂ 35 (3) ರನ್ವಯ ಯಾವುದೇ ರೀತಿಯ ಬೈಕ್ ರ್ಯಾಲಿ ನಡೆಸುವುದನ್ನು ಮತ್ತು ಯಾವುದೇ ಸಂಘಟನೆ ಕಾರ್ಯಕರ್ತರು ಬೈಕ್ ಗಳಲ್ಲಿ ಅಥವಾ ಬೈಕ್ ರ್ಯಾಲಿ ಮುಖಾಂತರ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರವೇಶಿಸದಂತೆ ನಿರ್ಬಂಧಕಾಜ್ಞೆಯನ್ನು ವಿಧಿಸಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಡಾ. ಕೆ.ಜಿ. ಜಗದೀಶ್ ಆದೇಶಿಸಿದ್ದಾರೆ.

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿರ್ಬಂಧಕಾಜ್ಞೆ ವಿಧಿಸಿ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News