ಗ್ರಾಮೀಣ ಕೃಷಿ ಯಂತ್ರೋಪಕರಣ ಗ್ರಾಮೀಣ ಕೃಷಿ ಯಂತ್ರೋಪಕರಣ ಸೇವಾಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

Update: 2017-09-06 16:14 GMT

ಉಡುಪಿ, ಸೆ.6: ಗ್ರಾಮೀಣ ಭಾಗದಲ್ಲಿ ಉದ್ಯೋಗ ಅವಕಾಶ ಸೃಜಿಸುವುದು, ಸ್ಥಳೀಯವಾಗಿ ಸಣ್ಣ ಕೃಷಿ ಉಪಕರಣಗಳ ತಯಾರಿಕಾ ಸೌಲಭ್ಯ ಕಲ್ಪಿಸುವುದು, ಕೃಷಿ ಯಂತ್ರಗಳ ಬಳಕೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಉಡುಪಿ ಜಿಲ್ಲೆಯಲ್ಲಿ 2017-18ನೇ ಸಾಲಿನಲ್ಲಿ ಪ್ರತೀ ತಾಲೂಕಿಗೆ ಒಂದರಂತೆ (ಪರಿಶಿಷ್ಟ ಜಾತಿ-1, ಪರಿಶಿಷ್ಟ ಪಂಗಡ-1 ಹಾಗೂ ಸಾಮಾನ್ಯ ವರ್ಗ-1) ಗ್ರಾಮೀಣ ಕೃಷಿ ಯಂತ್ರೋಪಕರಣ ಸೇವಾ ಕೇಂದ್ರ ಸ್ಥಾಪನೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

 ಅರ್ಜಿ ಸಲ್ಲಿಸಬಯಸುವ ಅ್ಯರ್ಥಿಗಳು ಉಡುಪಿ ಜಿಲ್ಲೆಯವರಾಗಿದ್ದು, ಕೃಷಿ ಕುಟುಂಬಕ್ಕೆ ಸೇರಿರಬೇಕು. 18ರಿಂದ 45ರ ವಯೋಮಿತಿಯಲ್ಲಿರಬೇಕು. ಅರ್ಜಿ ಸಲ್ಲಿಸಲು ಅ.3 ಕೊನೆಯ ದಿನವಾಗಿದೆ. ಅರ್ಜಿಗಳನ್ನು ತಾಲೂಕುಗಳ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಹೋಬಳಿ ಮಟ್ಟದಲ್ಲಿರುವ ರೈತ ಸಂಪರ್ಕ ಕೇಂದ್ರಗಳಿಂದ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಜಂಟಿ ನಿರ್ದೇಶಕರ ಕಚೇರಿ, ಸಿ ಬ್ಲಾಕ್, 2ನೇ ಮಹಡಿ ಕೊಠಡಿ ಸಂಖ್ಯೆ 304, ರಜತಾದ್ರಿ ಮಣಿಪಾಲ ಇಲ್ಲಿಗೆ ತಲುಪುವಂತೆ ಸಲ್ಲಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News