ಮತೀಯ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಶಿಷ್ಯವೇತನ

Update: 2017-09-06 16:18 GMT

ಉಡುಪಿ, ಸೆ.6: ತಾಲೂಕಿನ ಸರಕಾರಿ/ಖಾಸಗಿ ಐಟಿಐ/ಪಾಲಿಟೆಕ್ನಿಕ್‌ಗಳಲ್ಲಿ ಡಿಪ್ಲೋಮಾ ತರಬೇತಿ ಪಡೆಯುತ್ತಿರುವ ಮತೀಯ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಮಂಜೂರು ಮಾಡುವ ಬಗ್ಗೆ ಅರ್ಹ ವಿದ್ಯಾರ್ಥಿ ಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಸಲ್ಲಿಸಲು ಅಕ್ಟೋಬರ್ 16 ಕೊನೆಯ ದಿನವಾಗಿದೆ. ವಿದ್ಯಾರ್ಥಿ ಅಲ್ಪಸಂಖ್ಯಾತ ಜನಾಂಗಕ್ಕೆ ಅಂದರೆ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌಧ್ಧ ಹಾಗೂ ಪಾರ್ಸಿ ಸಮುದಾಯಕ್ಕೆ ಸೇರಿದ್ದು, ರಾಜ್ಯದ ನಿವಾಸಿ ಯಾಗಿರಬೇಕು. ಈ ಬಗ್ಗೆ ಸಂಬಂಧಿಸಿದ ಪ್ರಾಧಿಕಾರದಿಂದ ಪಡೆದ ಜಾತಿ/ಆದಾಯ ದೃಢೀಕರಣ ಪತ್ರದ ದೃಢೀಕೃತ ಪ್ರತಿ ಲಗತ್ತಿಸಬೇಕು.ಸ್ಟೈಪೆಂಡ್ ಪಡೆಯುವ ವಿದ್ಯಾರ್ಥಿ ಕಾಲೇಜಿನಲ್ಲಿ ಪ್ರತೀ ತಿಂಗಳು ಶೇ.75 ಹಾಜರಾತಿ ಹೊಂದಿರಬೇಕು. ಈ ಬಗ್ಗೆ ಆಯಾ ಕಾಲೇಜಿನ ಪ್ರಾಂಶುಪಾಲರು ದೃಢೀಕರಣ ಪತ್ರ ನೀಡಬೇಕು ಎಂದು ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಾರಿ ಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News