‘ಸಾಮರಸ್ಯ ನಡಿಗೆ’ ಕಾರ್ಯಕ್ರಮ ಮುಂದೂಡಿಕೆ
Update: 2017-09-06 21:51 IST
ಮಂಗಳೂರು, ಸೆ. 6: ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಸೆ.12ರಂದು ಫರಂಗಿಪೇಟೆಯಿಂದ ಮಾಣಿವರೆಗೆ ನಡೆಸಲು ಉದ್ದೇಶಿಸಿರುವ ‘ಸಾಮರಸ್ಯ ನಡಿಗೆ’ ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ಇಲಾಖೆಯ ಸಲಹೆ ಮೇರೆಗೆ ಮುಂದೂಡಲಾಗಿದೆ. ಕಾರ್ಯಕ್ರಮದ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಹರೀಶ್ ಕಮಾರ್‌ಪ್ರಕಟನೆಯಲ್ಲಿ ತಿಳಿಸಿದ್ದಾರೆ.