ಡಿಸೆಂಬರ್‌ನಲ್ಲಿ ಕರಾವಳಿ ಉತ್ಸವ

Update: 2017-09-06 16:37 GMT

ಮಂಗಳೂರು .6: ಈ ವರ್ಷದ ಕರಾವಳಿ ಉತ್ಸವವನ್ನು ಡಿಸೆಂಬರ್ ತಿಂಗಳಿನಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಈ ಬಗ್ಗೆ ಪೂರ್ವಭಾವಿ ಸಭೆ ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ್ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆುತು. ಜಿಲ್ಲಾಧಿಕಾರಿ ಮಾತನಾಡಿ, ಕರಾವಳಿ ಉತ್ಸವಕ್ಕೆ ಈಗಿನಿಂದಲೇ ಸಿದ್ಧತೆಗಳನ್ನು ನಡೆಸಬೇಕು. ಕರಾವಳಿ ಉತ್ಸವದ ಯಶಸ್ಸಿಗೆ ವಿವಿಧ ಸಮಿತಿಗಳನ್ನು ರಚಿಸಲಾಗುವುದು ಎಂದರು.

ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹೆಚ್ಚು ಜನಾಕರ್ಷಿಸಲು ಕರಾವಳಿಯ ಜನತೆಯ ಅಭಿರುಚಿಗೆ ತಕ್ಕಂತೆ ಕಾರ್ಯಕ್ರಮಗಳನ್ನು ನಡೆಸಬೇಕು. ಇದಲ್ಲದೇ ಸ್ಥಳೀಯ ಕಲಾವಿದರಿಗೂ ಹೆಚ್ಚಿನ ಕಾರ್ಯಕ್ರಮಗಳ ಅವಕಾಶ ನೀಡಲಾಗುವುದು. ಕದ್ರಿ ಪಾರ್ಕ್, ಕರಾವಳಿ ಉತ್ಸವ ಮೈದಾನ ಹಾಗೂ ಪಣಂಬೂರ್ ಬೀಚ್‌ನಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಜಗದೀಶ್ ತಿಳಿಸಿದರು.

 ಕರಾವಳಿ ಉತ್ಸವದ ಅವಧಿ ಮತ್ತು ಕಾರ್ಯಕ್ರಮವನ್ನು ಶೀಘ್ರವೇ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಅಂತಿಮಗೊಳಿಸಲಾಗುವುದು ಎಂದು ಸಚಿವರು ತಿಳಿಸಿದರು. ಕರಾವಳಿ ಉತ್ಸವವನ್ನು ಜನಾಕರ್ಷಿಸಲು ಸಾರ್ವಜನಿಕರಿಂದ ಸಲಹೆಗಳನ್ನು ಆಹ್ವಾನಿಸಲಾಗುವುದು ಎಂದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಳ ಜಗನ್ನಾಥ ಶೆಟ್ಟಿ ಮಾತನಾಡಿ, ಕರಾವಳಿ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರಿಗೆ ಹೆಚ್ಚು ಅವಕಾಶ ನೀಡಬೇಕು ಎಂದು ಹೇಳಿದರು.

 ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕುಮಾರ್, ಪುತ್ತೂರು ಉಪಭಾಗಾಧಿಕಾರಿ ಡಾ. ರಘುನಂದನ ಮೂರ್ತಿ, ಮಹಾನಗರಪಾಲಿಕೆ ಆಯುಕ್ತ ಮುಹಮ್ಮದ್ ನಝೀರ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಜಿ.ಪಂ. ಉಪಕಾರ್ಯದರ್ಶಿ ಎನ್.ಆರ್. ಉಮೇಶ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News