ಸೆ.7 ರಂದು ರಾಷ್ಟ್ರೀಯ ಪೌಷ್ಟಿಕ ಸಪ್ತಾಹ ಅರಿವು ಕಾರ್ಯಕ್ರಮ
ಚಿಕ್ಕಮಗಳೂರು, ಸೆ.7: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವಕೀಲರ ಸಂಘ, ವಾರ್ತಾ ಇಲಾಖೆ ಹಾಗೂ ತಾಲೂಕು ಸ್ತ್ರೀ ಶಕ್ತಿ ಒಕ್ಕೂಟ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಪೌಷ್ಟಿಕ ಸಪ್ತಾಹ ಅರಿವು ಕಾರ್ಯಕ್ರಮ ಸೆ.7 ರಂದು ಬೆಳಿಗ್ಗೆ 10.30 ಕ್ಕೆ ನಗರದ ಬೇಲೂರು ರಸ್ತೆಯ ತಾಲೂಕು ಸ್ತ್ರೀ ಶಕ್ತಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಡಿ.ಟಿ.ದೇವೆಂದ್ರನ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನಗರಸಭಾ ಸದಸ್ಯ ಅಪ್ಸರ್ ಅಹ್ಮದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಬಸವರಾಜ್ ಚೇಂಗಟಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಹೆಚ್.ಇ. ಆಝಾದ್ ಅಲಿಖಾನ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಉಪನಿರ್ದೇಶಕ ಕೆ.ಸಿ. ಬಸವರಾಜಯ್ಯ, ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಬಿ.ಎಚ್. ಕೃಷ್ಣಪ್ಪ, ತಾಲ್ಲೂಕು ವೈದ್ಯಾಧಿಕಾರಿ ಡಾ.ಆರ್. ಲೋಕೇಶ್, ತಾಲ್ಲೂಕು ಸ್ತ್ರೀ ಶಕ್ತಿ ಒಕ್ಕೂಟ, ಉಪಾಧ್ಯಕ್ಷೆ ಲೀಲಾವತಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.