×
Ad

ಸಾಗರ: ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಮನವಿ

Update: 2017-09-07 17:23 IST

ಸಾಗರ, ಸೆ.7: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಮಾಡಿದವರನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ವತಿಯಿಂದ ಗುರುವಾರ ಉಪವಿಭಾಗಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. 

ಈ ವೇಳೆ ಪ್ರತಿಭಟನಾಕಾರರು ಮಾತನಾಡಿ, ಮಹಿಳೆಯರ ಪ್ರೇರಕಶಕ್ತಿಯಾಗಿದ್ದ ಪತ್ರಕರ್ತೆ, ಹೋರಾಟಗಾರ್ತಿ, ಸಮಾಜಮುಖಿ ಚಿಂತನೆಯ ಗೌರಿ ಲಂಕೇಶ್ ಹತ್ಯೆಯನ್ನು ನಮ್ಮ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ. ಇದೊಂದು ಅಮಾನವೀಯ ಘಟನೆಯಾಗಿದ್ದು, ನಮ್ಮೆಲ್ಲರ ಕೊರಳದನಿಯನ್ನು ಅಡಗಿಸುವ ಪ್ರಯತ್ನವಾಗಿದೆ ಎಂದು ದೂರಿದರು. 

ಈ ಹತ್ಯೆಯ ಹಿಂದೆ ಯಾರೆ ಇದ್ದರೂ ಅವರನ್ನು ಬಂಧಿಸುವ ಮೂಲಕ ಇಂತಹ ಕೃತ್ಯಗಳು ಮರು ಕಳಿಸದಂತೆ ಮತ್ತಷ್ಟು ಅಮೂಲ್ಯ ಜೀವಗಳು ಬಲಿಯಾಗದಂತೆ ಸರ್ಕಾರ ಸೂಕ್ತ ಕ್ರಮವನ್ನು ತೆಗೆದುಕೊಳ್ಳಬೇಕು. ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ, ಅವರ ವಿರುದ್ಧ ಸೂಕ್ತ ಕಾನೂನುಕ್ರಮ ಜರಗಿಸುವ ಬಗ್ಗೆ ಸರ್ಕಾರ ಹೆಚ್ಚು ಗಮನ ಹರಿಸಬೇಕು ಎಂದು ಒತ್ತಾಯಿಸಿದರು. 

ಈ ಸಂದರ್ಭದಲ್ಲಿ ಒಕ್ಕೂಟದ ಪ್ರಮುಖರಾದ ಪ್ರತಿಭಾ ರಾಘವೇಂದ್ರ, ಇಂದಿರಾ ಮೋಹನ್ ಹೆಗಡೆ, ಎನ್.ಲಲಿತಮ್ಮ, ಅನಿತಾಕುಮಾರಿ, ವೀಣಾ ಪರಮೇಶ್ವರ್, ಗಂಗಮ್ಮ, ಬೀಬಿ ಫಸಿಹಾ, ಸರಸ್ವತಿ ಕುಮಾರಸ್ವಾಮಿ ಇನ್ನಿತರರು ಹಾಜರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News