ಸೆ.12: ಮೂಡುಬಿದಿರೆಯಲ್ಲಿ ವಲಯ ಮಟ್ಟದ ಪ್ರೌಢಶಾಲಾ ಶಿಕ್ಷಕರ ಶೈಕ್ಷಣಿಕ ಕಾರ್ಯಾಗಾರ

Update: 2017-09-07 13:27 GMT

ಮೂಡುಬಿದಿರೆ, ಸೆ. 7: ಎಸ್ಸೆಸ್ಸೆಲ್ಸಿ ಫಲಿತಾಂಶ ಉನ್ನತೀಕರಣದ ಅಂಗವಾಗಿ ಕನ್ನಡ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ  ಇದರ ವತಿಯಿಂದ ಮೂಡುಬಿದಿರೆ ವಲಯ ಮಟ್ಟದ ಪ್ರೌಢಶಾಲಾ ಶಿಕ್ಷಕರ ಶೈಕ್ಷಣಿಕ ಕಾರ್ಯಾಗಾರ ಮತ್ತು ಶೈಕ್ಷಣಿಕ ಸಮ್ಮೇಳನ ಸೆ.12ರಂದು ಮೂಡುಬಿದಿರೆಯ ರೋಟರಿ ಆಂಗ್ಲಮಾಧ್ಯಮ ಪ್ರೌಢಶಾಲೆಯ ರೋಟರಿ ಸಮ್ಮಿಲನ ಸಭಾಭವನದಲ್ಲಿ ನಡೆಯಲಿದೆ ಎಂದು ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ರಾಮಕೃಷ್ಣಶಿರೂರು ತಿಳಿಸಿದರು.

 ಅವರು ಮೂಡುಬಿದಿರೆ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಪತ್ರಿಕಾಗೋಷ್ಠಿಯನ್ನು ನಡೆಸಿ ಈ ಬಗ್ಗೆ ಮಾತನಾಡಿದರು.

 ಬೆಳಗ್ಗೆ 9.30 ರಿಂದ 11ರವರೆಗೆ ಶೈಕ್ಷಣಿಕ ಕಾರ್ಯಾಗಾರ ನಡೆಯಲಿದ್ದು ದ.ಕ ಉಪನಿರ್ದೇಶಕರ ಕಚೇರಿಯ ಪ್ರಭಾರ ಶಿಕ್ಷಣಾಧಿಕಾರಿ ಶಮಂತ್ ವಿ.ಎಂ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಎಸ್ಸೆಸ್ಸೆಲ್ಸಿ ಫಲಿತಾಂಶ ಉನ್ನತೀಕರಣ ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ. ಮಧ್ಯಾಹ್ನ 1.45ರಿಂದ 2.30ರವರೆಗೆ ನಡೆಯುವ ಶೈಕ್ಷಣಿಕ ಉಪನ್ಯಾಸದಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಬ್ರಹ್ಮಾವರ ಶ್ರೀ ನಿಕೇತನ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಅಶೋಕ್ ಕುಮಾರ್ ಶೆಟ್ಟಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಪ್ರೌಢ ಶಿಕ್ಷಣದ ಸ್ಥಿತ್ಯಂತರಗಳು ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ. ನಂತರ 2:30ರಿಂದ 3:30ರವರೆಗೆ ಶೈಕ್ಷಣಿಕ ಸಂವಾದ ನಡೆಯಲಿದೆ ಎಂದು ತಿಳಿಸಿದರು.

 ಶಾಸಕ ಕೆ. ಅಭಯಚಂದ್ರ ಜೈನ್ ಅಧ್ಯಕ್ಷತೆಯಲ್ಲಿ ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ ಅವರು ಬೆಳಗ್ಗೆ 11 ಗಂಟೆಗೆ ಕಾರ್ಯಾಗಾರವನ್ನು ಉದ್ಘಾಟಿಸಲಿದ್ದು, ವಿಧಾನ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್ ಸಹಿತ ಮತ್ತಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಶಿರೂರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News