×
Ad

ಮೂಡುಬಿದಿರೆ ಪ್ರಶಾಂತ್ ಪೂಜಾರಿ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜಾಮೀನು

Update: 2017-09-07 19:21 IST

ಮಂಗಳೂರು, ಸೆ. 7: 2015ರ ಸೆಪ್ಟೆಂಬರ್ ತಿಂಗಳಲ್ಲಿ ಮೂಡುಬಿದಿರೆ ಪೇಟೆಯಲ್ಲಿ ಸಂಘಪರಿವಾರದ ಕಾರ್ಯಕರ್ತ ಪ್ರಶಾಂತ್ ಪೂಜಾರಿ (32) ಕೊಲೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಮಂಗಳೂರು ನಾಲ್ಕನೆ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.

ಸಿರಾಜುದ್ದೀನ್ ಉಳ್ಳಾಲ, ತಾಜುದ್ದೀನ್, ಅಕ್ಬರ್ ವಳಚ್ಚಿಲ್ ಮತ್ತು ಅನ್ವರ್ ಬಜ್ಪೆ ಜಾಮೀನು ಪಡೆದ ಆರೋಪಿಗಳು.

ಪ್ರಶಾಂತ್ ಪೂಜಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೂಡುಬಿದಿರೆ ಪೊಲೀಸರು 10 ಮಂದಿಯನ್ನು ಬಂಧಿಸಿ 17 ಮಂದಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿ 7 ಮಂದಿ ಆರೋಪಿಗಳಲ್ಲಿ ಸಿರಾಜುದ್ದೀನ್ ಉಳ್ಳಾಲ, ತಾಜುದ್ದೀನ್, ಅಕ್ಬರ್ ವಳಚ್ಚಿಲ್ ಮತ್ತು ಅನ್ವರ್ ಬಜ್ಪೆ ಎರಡು ತಿಂಗಳ ಹಿಂದೆ ಮೂಡುಬಿದಿರೆ ನ್ಯಾಯಾಲಯಕ್ಕೆ ಶರಣಾಗಿದ್ದರು. ಅನಂತರ ಮೂಡುಬಿದಿರೆ ಪೊಲೀಸರು ಅವರನ್ನು ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಗಳು ಜಾಮೀನು ಕೋರಿ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.ಆರೋಪಿಗಳ ಪರವಾಗಿ ಅಶ್ರಫ್ ಕೆ. ಮತ್ತು ಅಬ್ದುಲ್ ಮಜೀದ್ ಖಾನ್ ವಾದಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News