ಸೆ.10: ನಗರ ಸಾರಿಗೆ ಬಸ್ ನಿಲ್ದಾಣಕ್ಕೆ ಶಂಕುಸ್ಥಾಪನೆ
Update: 2017-09-07 19:55 IST
ಉಡುಪಿ, ಸೆ.7: ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಉಡುಪಿ ನಗರದ ಮೂಡ ನಿಡಂಬೂರಿನಲ್ಲಿ ನೂತನ ನಗರ ಸಾರಿಗೆ ಬಸ್ ನಿಲ್ದಾಣಕ್ಕೆ ಶಂಕುಸ್ಥಾಪನೆಯನ್ನು ಸೆ.10ರಂದು ಬೆಳಗ್ಗೆ 11:30ಕ್ಕೆ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್, ಬೈಂದೂರು ಶಾಸಕರು ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಗೋಪಾಲ ಪೂಜಾರಿ ಹಾಗೂ ಜಿಲ್ಲೆ ಎಲ್ಲಾ ಜನಪ್ರತಿನಿಧಿಗಳು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.