×
Ad

ಬಿಪಿಎಲ್ ಕಾರ್ಡ್‌ಗಳನ್ನು ಶೀಘ್ರದಲ್ಲೇ ವಿತರಿಸಿ: ಪ್ರಮೋದ್

Update: 2017-09-07 20:29 IST

ಉಡುಪಿ, ಸೆ.7: ಆನ್‌ಲೈನ್ ಮೂಲಕ ಬಿಪಿಎಲ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಿರುವ ಕುಟುಂಬಗಳಿಗೆ ಸೆಪ್ಟಂಬರ್ ತಿಂಗಳ ಅಂತ್ಯದೊಳಗೆ ಕಾರ್ಡ್‌ಗಳನ್ನು ವಿತರಿಸುವಂತೆ ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಜಿಲ್ಲೆಯ ವಿವಿಧ ಇಲಾಖೆಗಳ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಾಂಗಣದಲ್ಲಿನಡೆದಜಿಲ್ಲೆಯವಿವಿ ಇಲಾಖೆಗಳ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸೆಯಅ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಜಿಲ್ಲೆಯ ವಿವಿದೆಡೆ ನಡೆಸಿದ ಜನಸಂಪರ್ಕ ಸಭೆಗಳಲ್ಲಿ ಮಾಹಿತಿ ನೀಡಿದ ಪರಿಣಾಮ 3428 ಕುಟುಂಬಗಳು ಬಿಪಿಎಲ್ ಕಾರ್ಡ್‌ಗಳಿಗೆ ಮೊದಲ ಹಂತದಲ್ಲಿ ಅರ್ಜಿ ಸಲ್ಲಿಸಿವೆ. ಈ ಕುಟುಂಬಗಳಿಗೆ ಸಂಬಂಧಿಸಿದ ಎಲ್ಲಾ ದಾಖಲಾತಿ ಪರಿಶೀಲನೆ ಮುಂತಾದ ಪ್ರಕ್ರಿಯೆಗಳನ್ನು ಶೀಘ್ರದಲ್ಲಿ ಮುಕ್ತಾಯ ಗೊಳಿಸಿ, ಸಿಬ್ಬಂದಿ ಕೊರತೆಯಿದ್ದಲ್ಲಿ ಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿಗಳನ್ನು ನಿಯೋಜಿಸಿ ಈ ತಿಂಗಳ ಕೊನೆಯೊಳಗೆ ಅವರಿಗೆ ಬಿಪಿಎಲ್ ಸೌಲ್ಯ ದೊರೆಯುವಂತೆ ಕ್ರಮ ಕೈಗೊಳ್ಳಿ ಎಂದು ಪ್ರಮೋದ್ ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರ್‌ಗಳಿಗೆ ಸೂಚಿಸಿದರು.

ಜಿಲ್ಲೆಯ ವಿವಿಧೆಡೆ ನಡೆಸಿದ ಜನಸಂಪರ್ಕ  ಸಭೆಗಳಲ್ಲಿ ಮಾಹಿತಿ ನೀಡಿದ ಪರಿಣಾಮ 3428ಕುಟುಂಬಗಳು ಬಿಪಿಎಲ್‌ ಕಾರ್ಡ್‌ಗಳಿಗೆ ಮೊದಲ ಹಂತದಲ್ಲಿ ಅರ್ಜಿಸಲ್ಲಿಸಿವೆ. ಈ ಕುಟುಂಬಗಳಿಗೆ ಸಂಬಂಧಿಸಿದ ಎಲ್ಲಾ ದಾಖಲಾತಿ ಪರಿಶೀಲನೆ ಮುಂತಾದ ಪ್ರಕ್ರಿಯೆಗಳನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸಿ, ಸಿಬ್ಬಂದಿ ಕೊರತೆಯಿದ್ದಲ್ಲಿ ಗುತ್ತಿಗೆ ಆದಾರದ ಮೇಲೆ ಸಿಬ್ಬಂದಿಗಳನ್ನು ನಿಯೋಜಿಸಿ ಈ ತಿಂಗಳ ಕೊನೆಯೊಳಗೆ ಅವರಿಗೆ ಬಿಪಿಎಲ್ ಸೌಲಭ್ಯ ದೊರೆಯುವಂತೆ ಕ್ರಮ ಕೈಗೊಳ್ಳಿ ಎಂದು ಪ್ರಮೋದ್ ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರ್‌ಗಳಿಗೆ ಸೂಚಿಸಿದರು.

94ಸಿಯಲ್ಲಿ ಇದುವರೆಗೂ 27,877 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, 3324 ಮಂದಿಗೆ ಮಾತ್ರ ಹಕ್ಕುಪತ್ರಗಳನ್ನು ನೀಡಲಾಗಿದೆ. ವಿವಿಧ ಹಂತದಲ್ಲಿ ಬಾಕಿ ಇರುವ ಅರ್ಜಿಗಳನ್ನು ಶೀಘ್ರದಲ್ಲಿ ಇತ್ಯರ್ಥ ಪಡಿಸಿ ಎಂದ ಸಚಿವರು, 94 ಸಿಸಿಯಲ್ಲಿ 7797 ಅರ್ಜಿ ಸ್ವೀಕರಿಸಿ ಕೇವಲ 149 ಮಂದಿಗೆ ಮಾತ್ರ ಹಕ್ಕು ಪತ್ರ ನೀಡಿದೆ. ವಿವಿಧ ಹಂತದಲ್ಲಿ ಬಾಕಿ ಇರುವ ಅರ್ಜಿಗಳನ್ನು ಕಾಲಮಿತಿಯಲ್ಲಿ ಇತ್ಯರ್ಥಗೊಳಿಸಿ ಹಾಗೂ ಅರ್ಜಿಗಳನ್ನು ತಿರಸ್ಕರಿಸುವ ಮುನ್ನ ಮತ್ತೊಮ್ಮೆ ಪರಿಶೀಲನೆ ನಡೆಸಿ, ಅರ್ಜಿದಾರರಿಗೆ ಸೂಕ್ತ ಕಾರಣಗಳನ್ನು ನೀಡಿ ಎಂದವರು ತಹಶೀಲ್ದಾರ್‌ಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿರುವ ಡಿಸಿ ಮನ್ನಾ ಜಾಗವನ್ನು ಗುರುತಿಸಿ, ತಾಲೂಕುವಾರು ಸಮಿತಿ ರಚಿಸಿ ಅರ್ಹರಿಗೆ ಜಮೀನು ಮಂಜೂರು ಮಾಡುವಂತೆ ಹಾಗೂ ಭೂನ್ಯಾಯ ಮಂಡಳಿಗಳಲ್ಲಿರುವ ಅರ್ಜಿಗಳನ್ನು ಶೀಘ್ರದಲ್ಲಿ ವಿಲೇವಾರಿ ಮಾಡುವಂತೆ ಸೂಚಿಸಿದರು.

ನವೆಂಬರ್ ಅಂತ್ಯದೊಳೆಗೆ ಜಿಲ್ಲೆಯಲ್ಲಿ ಕಾಮಗಾರಿ ಪ್ರಾರಂಭಿಸಿರುವ ಎಲ್ಲಾ ಕಾಂಕ್ರೀಟ್ ರಸ್ತೆಗಳ ಕಾಮಗಾರಿಯನ್ನು ಮುಗಿಸುವಂತೆ ಹಾಗೂ ಡಿಸೆಂಬರ್ ಒಳಗೆ ಎಲ್ಲಾ ರಸ್ತೆಗಳ ಪೇವರ್ ಫಿನಿಷ್ ಕಾಮಗಾರಿ ಮುಗಿಸುವಂತೆ ಇಂಜಿನಿಯರ್‌ಗಳಿಗೆ ಸೂಚಿಸಿದ ಸಚಿವರು, ಪ್ರಸ್ತುತ ಮಳೆಯಿಂದ ಗುಂಡಿ ಬಿದ್ದಿರುವ ರಸ್ತೆಗಳ ಸಂಪೂರ್ಣ ವರದಿ ನೀಡುವಂತೆ ಸೂಚಿಸಿದರು.

ಜಿಲ್ಲೆಗೆ ವಿವಿಧ ವಸತಿ ಯೋಜನೆಗಳಿಗೆ ಸಂಬಂಧಿಸಿ ನಿಗದಿಪಡಿಸಿದ ಗುರಿ ಸಾಧಿಸುವಂತೆ ಹಾಗೂ ಪ.ಜಾತಿ, ಪಂಗಡದ ಕಾಲೋನಿಗಳಲ್ಲಿ ಮನೆಯಿಲ್ಲದೇ ವಾಸಿಸುತ್ತಿರುವ ಕುಟುಂಬಗಳ ಮಾಹಿತಿಯನ್ನು ಸಲ್ಲಿುವಂತೆ ಅಧಿಕಾರಿಗಳಿಗೆ ಆದೇಶಿಸಿದರು.

ಮಲ್ಪೆ-ಪರ್ಕಳ-ಹಿರಿಯಡ್ಕ- ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯ ನಿರ್ವಹಣೆ ಕುರಿತಂತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಅಸಮರ್ಪಕ ನಿರ್ವಹಣೆ ಕುರಿತು ವರದಿ ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಿದರು.

ದೀನ್ ದಯಾಳ್‌ಯೋಜನೆಯಡಿ 4652 ಅರ್ಜಿಗಳು ಬಂದಿದ್ದು, ವಿದ್ಯುತ್ ಸೌಲ್ಯ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ವಿದ್ಯುತ್‌ಗೆ ಸಂಬಂಧಪಟ್ಟ ದೂರು ಗಳಿದ್ದಲ್ಲಿ 1912 ಉಚಿತ ಸಹಾಯವಾಣಿ ಕೇಂದ್ರಕ್ಕೆ ದೂರು ಸಲ್ಲಿಸಬಹುದು ಎಂದು ಮೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಜಿಪಂ ಸಿಇಒ ಶಿವಾನಂದ ಕಾಪಶಿ, ಕುಂದಾಪುರ ಉಪವಿಬಾಗಾಧಿಕಾರಿ ಶಿಲ್ಪಾನಾಗ್, ಅಪರ ಜಿಲ್ಲಾಧಿಕಾರಿ ಅನುರಾಧ ಹಾಗೂ ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News