×
Ad

ತಾಪಂ ಸಭೆ ಬಾಲಕಿಯರ ಹಾಸ್ಟೆಲ್ ಅವ್ಯವಸ್ಥೆ ಬಗ್ಗೆ ಧ್ವನಿ ಎತ್ತಿದ ಸದಸ್ಯರು

Update: 2017-09-08 17:08 IST

ಹಾಸನ,ಸೆ.8: ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಸಿಗಬೇಕಾದ ಮೂಲಭೂತ ಸೌಲಭ್ಯ ನೀಡದೆ ವಂಚಿಸಲಾಗಿದೆ ಎಂದು ಇತ್ತೀಚೆಗೆ ವಿದ್ಯಾರ್ಥಿಗಳು ಪ್ರತಿಭಟಿಸಿದ ಬಗ್ಗೆ ತಾಪಂ ಸದಸ್ಯರು ಸಾಮಾನ್ಯ ಸಭೆಯಲ್ಲಿ ಧ್ವನಿ ಎತ್ತಿ ಅಧಿಕಾರಿಗಳ ಗಮನಸೆಳೆದರು.

ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಬೆಳಿಗ್ಗೆ ಕರೆಯಲಾಗಿದ್ದ ಸಾಮಾನ್ಯ ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಸ್ಟೆಲ್ ಬಗ್ಗೆ ವಿವರ ನೀಡುವಾಗ ತಾಪಂ ಕೆಲ ಸದಸ್ಯರು ಸರಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಗೆ ಆಗಿರುವ ಅವ್ಯವಸ್ಥೆ ಬಗ್ಗೆ ಪ್ರಶ್ನೆ ಮಾಡಿದರು. ಎಸ್‍ಸಿ ಮತ್ತು ಎಸ್‍ಟಿ ಜನಾಂಗಕ್ಕೆ ಸೇರಿದ ಸುಮಾರು 600 ಜನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಪದವಿ, ನರ್ಸಿಂಗ್, ಪ್ಯಾರಾ ಮೆಡಿಕಲ್, ಪಿಯುಸಿ, ಬಿಇಡಿ, ಸ್ನಾತಕೋತ್ತರ ಪದವಿ ಸೇರಿದಂತೆ ವಿವಿಧ ಕೋರ್ಸ್‍ಗಳಲ್ಲಿ ಶಿಕ್ಷಣ ಪಡೆಯುತ್ತಿರುವವರು ಹಾಸ್ಟೆಲ್ನಲ್ಲಿ ಇದ್ದಾರೆ.

 ಕೆಲ ದಿನಗಳ ಹಿಂದೆ ಇದೆ ಹಾಸ್ಟೇಲ್‍ನಲ್ಲಿ ಕಳಪೆ ಗುಣಮಟ್ಟದ ಆಹಾರ ವಿತರಣೆಯನ್ನು ಮಾಡಲಾಗುತ್ತಿದೆ ಎಂದು ಖಂಡಿಸಿ ಕೊಳೆತ ಆಹಾರ ತರಕಾರಿಯನ್ನು ಬಳಸಿ ತಯಾರಿಸುವುದನ್ನು ವಿರೋಧಿಸಿ ಹಾಗೂ ಮೇಲ್ವಿಚಾರಕರ ದೌರ್ಜನ್ಯ ಮತ್ತು ದಬ್ಬಾಳಿಕೆ, ಜಾತಿ ನಿಂಧನೆ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡುವುದರ ಮೂಲಕ ಗಮನಸೆಳೆಯಲಾಗಿರುವುದರ ಬಗ್ಗೆ ಪತ್ರಿಕೆಯಲ್ಲಿ ನೋಡಿದ್ದೇವೆ. ಆಗೇ ಅದು ಸತ್ಯವಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಇಲ್ಲಿವರೆಗೂ ಪರಿಶೀಲಿಸಿ ಸಮಸ್ಯೆಯನ್ನು ಬಗೆಹರಿಸಿಲ್ಲವೇ? ಹಾಸ್ಟೇಲ್ ವಿಚಾರದಲ್ಲಿ ಯಾರಿಗೂ ಕೆಟ್ಟ ಹೆಸರು ಬರುವುದು ಬೇಡ. ಕೂಡಲೇ ಬಗೆಹರಿಸುವಂತೆ ಸಲಹೆ ನೀಡಿ ವಿವರ ಕೇಳಿದರು.

ಇದಕ್ಕೆ ಉತ್ತರಿಸಿದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಸರಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಯಾವ ಸಮಸ್ಯೆಗಳು ಇರುವುದಿಲ್ಲ. ಬಯೋಟ್ರಿಕ್‍ನಿಂದ ಸಲ್ಪ ಗೊಂದಲಗಳಾಗಿತ್ತು. ಇದೆ ಹಾಸ್ಟೇಲ್‍ನಲ್ಲಿ ಎಸ್‍ಎಫ್‍ಐ ಸಂಘಟನೆಯ ವಿದ್ಯಾರ್ಥಿನಿ ಇದ್ದು, ಇಲ್ಲಿನ ಮೇಲ್ವಿಚಾರಕಿ ಸುಮಾ ಎಂಬುವರ ಮೇಲೆ ಆರೋಪಿಸಿದ್ದಾರೆ. ಇಲ್ಲಿ ಯಾವುದೇ ಅವ್ಯವಸ್ಥೆಗಳಿಲ್ಲ. ಈಗಾಗಲೇ ಸ್ಥಳಕ್ಕೆ ಹೋಗಿ ಪರಿಶೀಲನೆ ಮಾಡಿ ಸರಿಪಡಿಸಿರುವುದಾಗಿ ಹೇಳಿದರು.

ಇದಕ್ಕೆ ಉತ್ತರಿಸಿದ ಸಂಬಂಧಪಟ್ಟ ಅಧಿಕಾರಿಗಳು, ನಗರ ಸಾರಿಗೆ ಬಸ್ ಇರುವುದರಿಂದ ಯಾವ ಸಮಸ್ಯೆ ಉಂಟಾಗುವುದಿಲ್ಲ. ಆಗೇ ವಿದ್ಯಾನಗರದ ಹಾಸೇಲ್ ನಿರ್ಮಾಣ ಹಂತದಲ್ಲಿ ಇದೆ ಎಂದರು. ನಂತರ ವಿವಿಧ ಇಲಾಖೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸಾಮಾನ್ಯ ಸಭೆಯಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷ ಬಿ.ಟಿ. ಸತೀಶ್, ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಯು.ಕೆ. ಶಿವನಂಜಪ್ಪ, ಕಾರ್ಯನಿರ್ವಹಣಾಧಿಕಾರಿ ದೇವರಾಜೇಗೌಡ ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News