ವಾಹನ ಢಿಕ್ಕಿ: ಪಾದಚಾರಿ ಮೃತ್ಯು
Update: 2017-09-08 21:28 IST
ಕಾಪು, ಸೆ.8: ಉಳಿಯಾರಗೋಳಿ ಗ್ರಾಮದ ಕಲ್ಯಾ ಕ್ರಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಅಪರಿಚಿತ ವಾಹನ ಢಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಂದು ಬೆಳಗಿನ ಜಾವ ನಡೆದಿದೆ.
ಮೃತರನ್ನು ಸುಂದರ ಪೂಜಾರಿ (60) ಎಂದು ಗುರುತಿಸಲಾಗಿದೆ. ಇವರು ವಾಯುವಿಹಾರಕ್ಕೆ ಹೋದಾಗ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದೆ. ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಸುಂದರ ಪೂಜಾರಿ ಸ್ಥಳದಲ್ಲೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.