×
Ad

​ಉಡುಪಿ: ಸೆ. 11ಕ್ಕೆ ರಕ್ತದಾನ ಶಿಬಿರ

Update: 2017-09-08 21:43 IST

ಉಡುಪಿ, ಸೆ.8: ಕರ್ನಾಟಕ ರಾಜ್ಯ ಉಪವಲಯ ಅರಣ್ಯಾಧಿಕಾರಿಗಳ ಸಂಘ ಬೆಂಗಳೂರು ಹಾಗೂ ಜಿಲ್ಲಾ ಸರಕಾರಿ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ಅರಣ್ಯ ಹುತಾತ್ಮರ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ  ಸೆ.11ರಂದು ಬೆಳಗ್ಗೆ 10ಕ್ಕೆ ಅಜ್ಜರಕಾಡು ಜಿಲ್ಲಾ ಸರಕಾರಿ ಆಸ್ಪತ್ರೆಯ ರಕ್ತನಿಧಿ ಕೇಂದ್ರದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಕುಂದಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್ ಪ್ರಭಾಕರನ್ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಉಪ ವಲಯ ಅರಣ್ಯ ಅಧಿಕಾರಿಗಳ ಸಂಘ ಉಡುಪಿ ಇದರ ಅಧ್ಯಕ್ಷ ಮಡೂರ ಕೊಠಾರಿ ವಹಿಸುವರು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News