ಬೆಳ್ತಂಗಡಿ: ಪತ್ರಿಕಾ ವರದಿಗಾರನ ಬಂಧನ ಖಂಡನೀಯ
ಬೆಳ್ತಂಗಡಿ, ಸೆ. 8: ವಾರ್ತಾಭಾರತಿ ಪತ್ರಿಕೆಯ ವರದಿಗಾರನ್ನು ಬಂಧಿಸಿರುವ ಪೊಲೀಸರ ಕ್ರಮ ಖಂಡನಾರ್ಹವಾಗಿದೆ ಜನರ ನೋವನ್ನು ಜನರಿಗೆ ತಿಳಿಸುವ ಕಾರ್ಯವನ್ನು ಮಾಡುವ ಪತ್ರಕರ್ತರನ್ನು ಬಂಧಿಸುವ ಮೂಲಕ ಜನರ ದ್ವನಿಯನ್ನು ಅಡಗಿಸುವ ಕಾರ್ಯಕ್ಕೆ ಮುಂದಾಗುತ್ತಿದ್ದಾರೆ ಇದು ಸರಿಯಲ್ಲ ಕೂಡಲೇ ಪ್ರಕರಣವನ್ನು ಹಿಂಪಡೆಯಬೇಕು ಎಂದು ದಲಿತ ಸಂಘರ್ಷಸಮಿತಿ (ಅಂಬೇಡ್ಕರ್‌ವಾದ) ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಹಾಗೂ ದ.ಕ ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ಅಧ್ಯಕ್ಷ ಚಂದು ಎಲ್ ಒತ್ತಾಯಿಸಿದ್ದಾರೆ.
ವಾರ್ತಾಭಾರತಿ ಪತ್ರಿಕೆಯ ಬಂಟ್ವಾಳ ವರದಿಗಾರರನ್ನು ಬಂಧಿಸಿರುವ ಪೊಲೀಸರ ಕ್ರಮ ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕುವಂತದ್ದಾಗಿದೆ ಇಂತಹ ಘಟನೆಗಳಿಗೆ ರಾಜ್ಯ ಸರಕಾರ ಅವಕಾಶ ನೀಡಬಾರದು ಕೂಡಲೇ ಪ್ರಕರಣ ಹಿಂಪಡೆಯಬೇಕು ಎಂದು ಸಿಪಿಐಎಂ ಪಕ್ಷದ ತಾಲೂಕು ಕಾರ್ಯದರ್ಶಿ ಶಿವಕುಮಾರ್ ಒತ್ತಾಯಿಸಿದ್ದಾರೆ.
ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾಂಕೋ ಅವರು ಘಟನೆಯನ್ನು ಖಂಡಿಸಿದ್ದು ಪತ್ರಿಕೆಯ ಮೇಲೆ ಉದ್ದೇಶಪೂರ್ವಕವಾಗಿ ಧಾಳಿ ನಡೆಸಲಾಗಿದ್ದು ಕೂಡಲೇ ಪ್ರಕರಣವನ್ನು ಹಿಂಪಡೆಯಬೇಕು ಇಲ್ಲವಾದಲ್ಲಿ ಮಾಧ್ಯಮ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರಾಜ್ಯ ಸಮಿತಿ ಸದಸ್ಯ ಶೇಖರ ಲಾಯಿಲ ಅವರು ಘಟನೆಯನ್ನು ಖಂಡಿಸಿದ್ದು ಪತ್ರಕರ್ತರನ್ನು ಬಂಧಿಸುವ ಮೂಲಕ ಜನರ ದ್ವನಿಯನ್ನು ಅಡಗಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ ಇದಕ್ಕೆ ಯಾವುದೇ ಕಾರಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.