×
Ad

ವಿದ್ಯಾರ್ಥಿಗಳಲ್ಲಿ ಹಡಗಿರುವ ಪ್ರತಿಭೆ ಹೊರತರಲು ಪ್ರತಿಭಾ ಕಾರಂಜಿ ಸಹಕಾರಿ: ಶಾಸಕ ಆರ್. ನರೇಂದ್ರ ರಾಜೂಗೌಡ

Update: 2017-09-08 22:16 IST

ಹನೂರು, ಸೆ.8: ವಿದ್ಯಾರ್ಥಿಗಳಲ್ಲಿ ಹಡಗಿರುವ ಪ್ರತಿಭೆಗಳನ್ನು ಹೊರತರುವಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮ ಅತ್ಯಂತ ಸಹಕಾರಿಯಾಗಿದ್ದು ಇದು ನಿರಂತರವಾಗಿ ನಡೆಯಬೇಕಾಗಿದೆ ಎಂದು ಶಾಸಕ ಆರ್. ನರೇಂದ್ರರಾಜೂಗೌಡ ತಿಳಿಸಿದರು.

ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಆಯೋಜಿಸಿದ್ದ  ಹನೂರು ವಲಯ ಮಟ್ಟದ ಪ್ರಾಥಮಿಕ ಶಾಲೆ ಹಾಗೂ ಪ್ರೌಡಶಾಲೆಗಳ ವಿದ್ಯಾರ್ಥಿಗಳಿಗೆ ಪ್ರತಿಭಾಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಪ್ರತಿಭೆಯನ್ನು ಹೊರಹಾಕಲು ಶಿಕ್ಷಣ ಇಲಾಖೆ ಪ್ರತಿಭಾಕಾರಂಜಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಇದರಲ್ಲಿ ವಿದ್ಯಾರ್ಥಿಗಳಲ್ಲಿರುವ ಪಠ್ಯೇತರ ಚಟುವಟಿಕೆಗಳನ್ನು ಹೊರತರುವಲ್ಲಿ ಸೂಕ್ತ ವೇದಿಕೆಯಾಗಿದೆ. ಶಿಕ್ಷಕರು ತಮ್ಮಆಸಕ್ತಿಯನ್ನು ವಹಿಸಿ ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತಂದು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಪ್ರತಿನಿಧಿಸಿ ಹನೂರು ಶೈಕ್ಷಣಿಕ ವಲಯಕ್ಕೆ ಹಾಗೂ ತಮ್ಮ ಶಾಲೆಗೆ ಕೀರ್ತಿತರುವಂತಾಗಬೇಕು ಎಂದು ಕರೆ ನೀಡಿದರು.

ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಬಸವರಾಜು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಮಾನವೀಯ ಪ್ರಜ್ಞೆಯನ್ನು ಬೆಳೆಸುವುದರ ಮೂಲಕ ಅವರನ್ನುಸಮಾಜದ ಉತ್ತಮ ನಾಗರಿಕರನ್ನಾಗಿ ರೂಪಿಸುವ ಹೊಣೆಗಾರಿಕೆ ಶಿಕ್ಷಕರ ಮೇಲಿದೆ ಎಂದರು.

ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷೆ ಮಮತಾ, ಉಪಾಧ್ಯಕ್ಷ ಬಸವರಾಜು, ಶಿಕ್ಷಕರ ಸಂಘದ ಅಧ್ಯಕ್ಷ ಜಾನ್‍ ಬ್ರಿಟ್ಟೋ, ಗಿರೀಶ್, ಶಿವಮಲ್ಲು, ರೂಪಶ್ರೀ, ನಂಜುಂಡಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಮಹದೇವಪ್ಪ, ಬಿ.ಆರ್.ಸಿ ಕ್ಯಾತ, ಬಿಆರ್ ಪಿಗಳು, ಸಿಆರ್ ಪಿಗಳು, ವಿವಿಧ ಶಾಲೆಗಳಿಂದ ಆಗಮಿಸಿದ್ದ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದ್ದರು.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News