×
Ad

ಗೌರಿ ಲಂಕೇಶ್ ಹತ್ಯೆ ತನಿಖೆಗೆ ಕಟ್ಟುನಿಟ್ಟಿನ ಆದೇಶ: ಸಿಎಂ ಸಿದ್ದರಾಮಯ್ಯ

Update: 2017-09-08 22:52 IST

ಮಂಡ್ಯ, ಸೆ.6: ಹಿರಿಯ ಪತ್ರಕರ್ತೆ, ಚಿಂತಕಿ ಗೌರಿ ಲಂಕೇಶ್ ಹತ್ಯೆ ಆರೋಪಿಗಳ ಪತ್ತೆಹಚ್ಚಲು ಪೊಲೀಸರಿಗೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಲೂಕಿನ ಇಂಡುವಾಳು ಬಳಿ ಹೆಲಿಪ್ಯಾಡ್‍ನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‍ಐಟಿ ತನಿಖೆ ಪ್ರಾರಂಭವಾಗಿದ್ದು, ಇಂತಿಷ್ಟೆ ದಿನವೆಂದು ನಿಗದಿಪಡಿಸಲು ಆಗುವುದಿಲ್ಲ. ಸಿಬಿಐ ತನಿಖೆಗೆ ಒಪ್ಪಿಸಬೇಕೆಂಬ ಗೌರಿ ಕುಟುಂಬದವರ ಒತ್ತಾಯದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಲಂಕೇಶ್ ಕುಟುಂಬದವರು ನನಗೆ ಚೆನ್ನಾಗಿ ಗೊತ್ತಿದೆ. ಈ ಕುರಿತು ಅವರ ಜತೆ ಮಾತನಾಡುತ್ತೇನೆ ಎಂದು ತಿಳಿಸಿದರು.

ಮಹಾದಾಯಿ ನೀರು ವಿಚಾರದಲ್ಲಿ ಗೋವಾ, ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಎರಡು ಬಾರಿ ಪತ್ರ ಬರೆದಿದ್ದರೂ ಅವರು ಒಪ್ಪುತ್ತಿಲ್ಲ. ಅಲ್ಲದೆ,  ಜೆಪಿಯವರು ಒಪ್ಪಿಸುತ್ತಿಲ್ಲ. ಪ್ರಧಾನಮಂತ್ರಿ ಮಧ್ಯೆಪ್ರವೇಶಿಸಿದರೆ ಮಾತ್ರ ಸಮಸ್ಯೆ ಪರಿಹಾರವಾಗುತ್ತದೆ ಎಂದು ಅವರು ಹೇಳಿದರು.

ಮೇಕೆದಾಟು ಯೋಜನೆ ಪ್ರಗತಿಯಲ್ಲಿದೆ. ಈ ಕುರಿತ ಕೇಂದ್ರಕ್ಕೆ ವಿವರ ಸಲ್ಲಿಸಲಾಗಿದೆ. ಐಸಿಸಿ ಸಭೆ ನಡೆಸಿ ನಾಲೆಗಳಿಗೆ ನೀರು ಬಿಡಲು ತೀರ್ಮಾನ ತೆಗೆದುಕೊಳ್ಳಲು ಸೂಚಿಸಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News