ಸಮಾಜ ವಿಭಜಿಸುವುದರಲ್ಲಿ ಬಿಜೆಪಿ, ನರೇಂದ್ರ ಮೋದಿ ಬ್ಯುಸಿ: ರಾಹುಲ್ ಗಾಂಧಿ

Update: 2017-09-08 17:37 GMT

ಹೊಸದಿಲ್ಲಿ, 8 : ಬಿಜೆಪಿ ಬಗ್ಗೆ ಮತ್ತೆ ಅಪಹಾಸ್ಯ ಮಾಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಬಿಜೆಪಿ ಹಾಗೂ ನರೇಂದ್ರ ಮೋದಿ ಅವರು ಸಮಾಜವನ್ನು ವಿಭಜಿಸುತ್ತಿದ್ದಾರೆ ಎಂದು ಶುಕ್ರವಾರ ಹೇಳಿದ್ದಾರೆ.

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯಾದ ಬಳಿಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯನ್ನು ಕಟುವಾಗಿ ಟೀಕಿಸುತ್ತಿದ್ದಾರೆ. ಹಿರಿಯ ಪತ್ರಕರ್ತೆಯ ಹತ್ಯೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಯಾವುದೇ ಹೇಳಿಕೆ ನೀಡದಿರುವುದರ ಬಗ್ಗೆ ರಾಹುಲ್ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಗದು ಅಪಮೌಲ್ಯೀಕರಣ ಸೇರಿದಂತೆ ಹಲವು ವಿಷಯಗಳ ಬಗ್ಗೆ ರಾಹುಲ್ ಗಾಂಧಿ ಅವರು ಪ್ರಧಾನಿ ಅವರನ್ನು ಟೀಕಿಸಿದ್ದರು. ಬಿಜೆಪಿ ಹಾಗೂ ಆರೆಸ್ಸೆಸ್ ವಿರುದ್ಧ ಮಾತನಾಡಿದರೆ ಹತ್ಯೆ ಮಾಡಲಾಗುತ್ತದೆ ಎಂದು ಕೂಡ ಹೇಳಿದ್ದರು.

ನಗದು ಅಪಮೌಲ್ಯೀಕರಣ ಸಂಪೂರ್ಣ ವಿಫಲವಾಗಿದೆ. ಇದು ಭಾರತದ ಕಳ್ಳರು ಕಪ್ಪು ಹಣವನ್ನು ಬಿಳಿ ಮಾಡಿಕೊಳ್ಳುವುದಕ್ಕೆ ಅನುಕೂಲವಾಯಿತು ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ, ಈ ಹಿಂದೆ ನಡೆದ ಆರೆಸ್ಸೆಸ್ ಕಾರ್ಯಕರ್ತರ ಹತ್ಯೆ ಬಗ್ಗೆ ರಾಹುಲ್ ಗಾಂಧಿ ಯಾಕೆ ಮೌನವಾಗಿದ್ದಾರೆ ಎಂದು ಪ್ರಶ್ನಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News