ಬ್ಯಾರೀಸ್ ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಶಿಕ್ಷಕರ ದಿನಾಚರಣೆ

Update: 2017-09-09 08:19 GMT

ಮಂಗಳೂರು, ಸೆ.9: ಬ್ಯಾರೀಸ್ ಇನ್ಸ್‌ಟಿಟ್ಯೂಟ್ ಆಪ್ ಟೆಕ್ನಾಲಜಿಯ ವಿದ್ಯಾರ್ಥಿಗಳು ಶಿಕ್ಷಕರ ದಿನದಂದು ಕಾಲೇಜು ಕ್ಯಾಂಪಸ್‌ನಲ್ಲಿ ಕಾರ್ಯಕ್ರಮ ಆಯೋಜಿಸಿದ್ದರು. ಅಂತಿಮ ವರ್ಷದ ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಮುಂದಾಳುತ್ವ ವಹಿಸಿದ್ದರು.

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ.ಎ.ಜೆ.ಆ್ಯಂಟನಿ, ವಿದ್ಯಾರ್ಥಿಯ ಜೀವನವನ್ನು ಬದಲಿಸುವಲ್ಲಿ ಶಿಕ್ಷಕನ ಪಾತ್ರವನ್ನು ವಿವರಿಸಿದರು ಮತ್ತು ಶಿಕ್ಷಕರು ತಮ್ಮ ಗೌರವವನ್ನು ವಿದ್ಯಾರ್ಥಿಗಳಿಂದ ಪಡೆಯಲು ಆಜ್ಞಾಪಿಸಬಾರದು ಅಥವಾ ಬೇಡಿಕೆ ಮಾಡಬಾರದು. ಬಿಐಟಿ ಶಿಕ್ಷಣ ಸಂಸ್ಥೆಯನ್ನು ಉನ್ನತ ಮಟ್ಟಕ್ಕೆ ತೆಗೆದುಕೊಳ್ಳಲು ಹಾಗೂ ಉತ್ತಮ ಕೆಲಸವನ್ನು ಮುಂದುವರಿಸಲು ಶಿಕ್ಷಕರಿಗೆ ಸಲಹೆ ನೀಡಿದರು.

ಔಪಚಾರಿಕ ಕಾರ್ಯಕ್ರಮದ ನಂತರ ಬೋಧನಾ ಸದಸ್ಯರಿಗೆ ವಿವಿಧ ಆಟಗಳು ಮತ್ತು ಚಟುವಟಿಕೆಗಳು ನಡೆದವು. ಎಲ್ಲಾ ಶಿಕ್ಷಕರು ಸಕ್ರಿಯವಾಗಿ ಭಾಗವಹಿಸಿದರು. ಕೆಲವು ವಿದ್ಯಾರ್ಥಿಗಳು ಪ್ರೇಕ್ಷಕರನ್ನು ನೃತ್ಯ ಮತ್ತು ಸಂಗೀತ ಪ್ರದರ್ಶನಗಳೊಂದಿಗೆ ಆಕರ್ಷಿಸಿದರು. ಶಿಕ್ಷಕರು ಹಾಗೂ ಸಿಬ್ಬಂದಿ ಕೇಕ್ ಕತ್ತರಿ ಸಂಭ್ರಮಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News