ಮಂಗಳೂರು: ವೇಶ್ಯಾವಾಟಿಕೆ ಅಡ್ಡೆಗೆ ದಾಳಿ; ಓರ್ವನ ಸೆರೆ, ಇನ್ನೋರ್ವ ಪರಾರಿ

Update: 2017-09-09 13:51 GMT

ಮಂಗಳೂರು, ಸೆ.9: ಕದ್ರಿಯಲ್ಲಿ ಮನೆಯೊಂದನ್ನು ಕೇಂದ್ರೀಕರಿಸಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗೆ ಕದ್ರಿ ಪೊಲೀಸರು ಇಂದು ದಾಳಿ ನಡೆಸಿದ್ದಾರೆ.

ಕದ್ರಿ ಕೈಬಟ್ಟಲು ಎಂಬಲ್ಲಿನ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿತ್ತೆನ್ನಲಾಗಿದೆ. ಕಾರ್ಯಾಚರಣೆಯಲ್ಲಿ ಐವರು ಮಹಿಳೆಯರನ್ನು ರಕ್ಷಿಸಿರುವ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಇನ್ನೋರ್ವ ಆರೋಪಿ ಪರಾರಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಕದ್ರಿ ಇನ್ ಸ್ಪೆಕ್ಟರ್ ಮಾರುತಿ ನಾಯಕ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News