ಜಿಲ್ಲಾಮಟ್ಟದ ಪ.ಪೂ. ಕಾಲೇಜುಗಳ ಖೋ-ಖೋ ಪಂದ್ಯಾಟ : ಆಳ್ವಾಸ್‍ಗೆ ಅವಳಿ ಪ್ರಶಸ್ತಿ

Update: 2017-09-09 12:51 GMT

ಮೂಡಬಿದಿರೆ,ಸೆ.9: ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಆಳ್ವಾಸ್ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ಮೂಡುಬಿದಿರೆಯಲ್ಲಿ ಶನಿವಾರ ಜರುಗಿದ ಜರುಗಿದ ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ತಂಡವು 10ನೇ ಬಾರಿಗೆ ಪ್ರಶಸ್ತಿಯನ್ನು ಅವಳಿ ಪ್ರಶಸ್ತಿಯನ್ನು ಪಡೆದುಕೊಂಡಿದೆ. 

ಹುಡುಗರ ವಿಭಾಗದಲ್ಲಿ ಮಂಗಳೂರು ಗ್ರಾಮಾಂತರ ತಂಡವನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ಮಂಗಳೂರು ನಗರವನ್ನು ಪ್ರತಿನಿಧಿಸಿದ ಕಪಿತಾನಿಯೋ ಪ.ಪೂ. ಕಾಲೇಜನ್ನು 1 ಇನ್ನಿಂಗ್ಸ್ ಹಾಗೂ 04 ಅಂಕಗಳಿಂದ ಸೋಲಿಸಿತು. ಹುಡುಗಿಯರ ವಿಭಾಗದಲ್ಲಿ ಮಂಗಳೂರು ಗ್ರಾಮಾಂತರ ತಂಡವನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ಪುತ್ತೂರನ್ನು ಪ್ರತಿನಿಧಿಸಿದ ರಾಮಕುಂಜೇಶ್ವರ ಪ.ಪೂ. ಕಾಲೇಜು, ರಾಮಕುಂಜ ತಂಡವನ್ನು 1 ಇನ್ನಿಂಗ್ಸ್ ಹಾಗೂ 09 ಅಂಕಗಳಿಂದ ಸೋಲಿಸಿ 10ನೇ ಬಾರಿಗೆ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. 

ಬಹುಮಾನ ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ.ರಮೇಶ್ ಶೆಟ್ಟಿ, ದೈಹಿಕ ಶಿಕ್ಷಣ ನಿರ್ದೇಶಕರುಗಳಾದ ರಾಧಾಕೃಷ್ಣ, ಪ್ರದೀಪ್ ಕೆ.ಸಿ., ಪ್ರೀತಿಶರತ್ ಪ್ರಶಸ್ತಿ ವಿತರಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರುಗಳಾದ ನವೀನ್ ರೈ, ಹರ್ಷಿತಾ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News