ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ

Update: 2017-09-09 16:29 GMT

ಉಡುಪಿ, ಸೆ.9: ವೈಯಕ್ತಿಕ ಕಾರಣದಿಂದ ಮನನೊಂದ ಕುಕ್ಕಿಕಟ್ಟೆಯ ಕೆ. ಹರಿಶ್ಚಂದ್ರ ಆಚಾರ್ಯ ಎಂಬವರ ಮಗ, ಇಂದಿರಾನಗರದ ನಿವಾಸಿ ನಾಗರಾಜ (34) ಎಂಬವರು ಸೆ.8ರಂದು ಮಧ್ಯಾಹ್ನ ಮಲಗುವ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಣಿಪಾಲ:ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನೆ ಯಲ್ಲಿ ಸೆ.1ರಂದು ರಾತ್ರಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಹೆರ್ಗಾ ಮೂಡುಪಾಲು ನಿವಾಸಿ ಚಂದ್ರಶೇಖರ(60) ಎಂಬವರು ಸೆ.9ರಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಂದಾಪುರ:ಹಲವು ವರ್ಷಗಳಿಂದ ಉಬ್ಬಸ ಕಾಯಿಲೆಯಿಂದ ಬಳಲು ತ್ತಿದ್ದ ಕುಂದಾಪುರ ಆಂಜನೇಯ ದೇವಸ್ಥಾನದ ಬಳಿ ನಿವಾಸಿ ದೇವರಾಯ ಕಾಮತ್(88) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಸೆ.9ರಂದು ಮಧ್ಯಾಹ್ನ ವೇಳೆ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News