×
Ad

ಸ್ನೇಹಚಾರ ಉಳಿಸಲು ಕ್ರೀಡೆಗಳು ಸಹಕಾರಿ-ಸುಧಾಕರ ಶೆಟ್ಟಿ

Update: 2017-09-10 19:23 IST

ಪುತ್ತೂರು, ಸೆ. 10: ಗ್ರಾಮೀಣ ಕ್ರೀಡೆಯಾದ ಕಬಡ್ಡಿ ಇದೀಗ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಜ್ವಲಿಸುತ್ತಿದೆ. ಮನುಷ್ಯರ ನಡುವಿನ ಗೋಡೆಯನ್ನು ಕೆಡವಿ ಸ್ನೇಹಚಾರ ಉಳಿಸುವಲ್ಲಿ ಕ್ರೀಡೆಗಳು ಸಹಕಾರಿಯಾಗಿದೆ ಎಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎನ್. ಸುಧಾಕರ ಶೆಟ್ಟಿ ಹೇಳಿದರು.

ಅವರು ರವಿವಾರ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆದ ಆಹ್ವಾನಿತ ತಂಡಗಳ 3ನೇ ವರ್ಷದ ಪ್ರೋ ಕಬಡ್ಡಿ ಮಾದರಿಯ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು. ಕ್ರೀಡಗಳು ಕೇವಲ ಮನರಂಜನೆಯಲ್ಲ ಪರಸ್ಪರ ಶಾಂತಿ ಮತ್ತು ಪ್ರೀತಿಯ ಸಂಕೇತವಾಗಿದ್ದು, ಯುವ ಸಮುದಾಯ ಕ್ರೀಡಾ ಸ್ಪೂರ್ತಿಯನ್ನು ಬೆಳೆಸಿಕೊಳ್ಳುವ ಅಗತ್ಯವಿದೆ ಎಂದರು.

ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕೋಟಿ ಚೆನ್ನಯ ದಾರಾವಾಹಿ ನಟಿ ಸಮನ್ವಿ ರೈ ಮದಕ, ರಾಷ್ಟ್ರೀಯ ಕ್ರೀಡಾಪಟು ಪ್ರದೀಪ್ ಶೆಟ್ಟಿ, 10ನೇ ತರಗತಿಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಪೂರ್ಣಾನಂದ, ಡ್ಯಾನ್ಸ್ ಡ್ಯಾನ್ಸ್ ಖ್ಯಾತಿಯ ದೀಕ್ಷಾ ರೈ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ತಾಲೂಕು ಬಿಜೆಪಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಸುದಾನ ವಸತಿಯುತ ಶಾಲೆ ಸಂಚಾಲಕ ರೆ.ಫಾ. ವಿಜಯ ಹಾರ್ವಿನ್, ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಯು.ಪಿ. ರಾಮಕೃಷ್ಣ, ಸಂಪ್ಯ ವಿಷ್ಣುಮೂರ್ತಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರವೀಂದ್ರ ಶೆಟ್ಟಿ ನುಳಿಯಾಲು, ರಿಸರ್ವ್ ಬ್ಯಾಂಕ್‌ನ ಮಾಜಿ ನಿರ್ದೇಶಕ ನವೀನ್ ಭಂಡಾರಿ, ಉಪತಹಸೀಲ್ದಾರ್ ಶ್ರೀಧರ್, ನಗರಸಭಾ ಸದಸ್ಯ ರಾಜೇಶ್ ಬನ್ನೂರು, ಜಯಕರ್ನಾಟಕ ಸಂಘಟನೆಯ ತಾಲೂಕು ಉಪಾಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಉದ್ಯಮಿ ರೋಶನ್ ರೈ ಬನ್ನೂರು. ಎಪಿಎಂಸಿ ಅಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ, ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ, ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಕಬಡ್ಡಿ ಕಫ್ತಾನ ಪ್ರವೀಣ್ ಚಂದ್ರ ಆಳ್ವ, ರತನ್ ನಾಯಕ್ ಕರ್ನೂರುಗುತ್ತು, ವಿವೇಕಾನಂದ ಶಾಲೆಯ ವಿನೋದ್ ಕುಮಾರ್ ರೈ, ತಾಲೂಕು ಅಮೆಚೂರು ಕಬಡ್ಡಿ ಎಸೋಸಿಯೇಶನ್ ಚಂದ್ರಹಾಸ ಶೆಟ್ಟಿ, ಅಧ್ಯಕ್ಷ ಸುರೇಂದ್ರ ರೈ, ಪಂದ್ಯಾಟ ಸಮಿತಿ ಅಧ್ಯಕ್ಷ ಪ್ರಸನ್ನ ಕುಮಾರ್ ಶೆಟ್ಟಿ ಕಾರ್ಯದರ್ಶಿ ಪುರುಷೋತ್ತಮ ಗೌಡ ಕೋಲ್ಪೆ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯದರ್ಶಿ ದಯಾನಂದ ರೈ ಕೊರ್ಂಂಡ ಸ್ವಾಗತಿಸಿದರು. ರಫೀಕ್ ಎಂ ವಂದಿಸಿದರು. ಶಿಕ್ಷಕ ಬಾಲಕೃಷ್ಣ ಪೊರ್ದಾಲ್ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News