ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ
Update: 2017-09-10 19:55 IST
ಬೆಂಗಳೂರು, ಸೆ.10: ಅಪ್ರಾಪ್ತ ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಹುಳಿಮಾವು ಠಾಣಾ ಪೊಲೀಸರು ಬಂಧಿಸಿದ್ದಾರೆ.
ನಗರದ ಹುಳಿಮಾವಿನ ಕಿರಣ್ ಎಂಬುವರನ್ನು ಪೊಲೀಸರು ಪೊಕ್ಸೋ ಕಾಯ್ದೆ ಅಡಿ ಬಂಧಿಸಿದ್ದಾರೆ.
ಆರೋಪಿ ಕಿರಣ್ ವಾಸವಿದ್ದ ಪಕ್ಕದ ಮನೆಯ ಬೀದಿಯ ಅಪ್ರಾಪ್ತ ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನುವ ಆರೋಪ ಕೇಳಿಬಂದ ದೂರಿನ್ವಯ ಕಿರಣ್‌ನನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ ಪೊಲೀಸರು ತಿಳಿಸಿದ್ದಾರೆ.