×
Ad

ಮಡಿಕೇರಿ: ವ್ಯಕ್ತಿ ಹತ್ಯೆ

Update: 2017-09-10 22:17 IST

ಮಡಿಕೇರಿ, ಸೆ.10: ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ಮಾರಕಾಯುಧಗಳಿಂದ ಥಳಿಸಿ ಹತ್ಯೆಗೈದಿರುವ ಘಟನೆ ಮಾದಾಪುರ ಸಮೀಪದ ಜಂಬೂರು ಬಾಣೆ ಗ್ರಾಮದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

 ಜಂಬೂರು ಬಾಣೆ ನಿವಾಸಿ, ಆಟೊ ಚಾಲಕ ಸತೀಶ್(28) ಎಂಬವರು ಕೊಲೆಯಾಗಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ.

ಜಂಬೂರು ಬಾಣೆ ನಿವಾಸಿಗಳಾದ ಬಸಪ್ಪ, ರುದ್ರಕುಮಾರ್, ಜಯಾನಂದ  ಮತ್ತು ಗೋವಿಂದರಾಜು ಎಂಬವರು ರಾತ್ರಿ ಆಟೋದಲ್ಲಿ ಮನೆಯತ್ತ ಮರಳುತ್ತಿದ್ದ ಸತೀಶ್‍ನನ್ನು ಅಡ್ಡಗಟ್ಟಿ ಮಾರಕಾಯುಧಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. 

ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದ ಸತೀಶ್ ಅವರನ್ನು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಮೃತ್ ಪಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸೋಮವಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News