ಎನ್‌ಕೌಂಟರ್: ಇಬ್ಬರು ಉಗ್ರರು ಸಾವು
Update: 2017-09-10 22:50 IST
ಶ್ರೀನಗರ, ಸೆ. 10: ಜಮ್ಮುಕಾಶ್ಮೀರದ ಶೋಫಿಯಾನ ಜಿಲ್ಲೆಯಲ್ಲಿ ರವಿವಾರ ಭದ್ರತಾ ಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.
ಇನ್ನೋರ್ವ ಉಗ್ರನನ್ನು ಬಂಧಿಸಲಾಗಿದೆ. ಆತನಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಹತರಾದ ಇಬ್ಬರು ಉಗ್ರರಲ್ಲಿ ಓರ್ವನನ್ನು ಹಿಜ್ಬುಲ್ ಮುಜಾಹಿದ್ದೀನ್‌ನ ತಾರಿಕ್ ಅಹ್ ಭಟ್ ಎಂದು ಗುರುತಿಸಲಾಗಿದೆ.
ಭದ್ರತಾ ಪಡೆಯಿಂದ ಸೆರೆಯಾದ ಉಗ್ರ ಲಷ್ಕರ್-ಎ-ತೊಯ್ಬಾ ಸಂಘಟನೆಯ ಆದಿಲ್ ದಾರ್ ಎಂದು ಗುರುತಿಸಲಾಗಿದೆ. ಮೂರು ತಿಂಗಳ ಹಿಂದೆ ಈತ ಲಷ್ಕರ್-ಎ-ತೊಯ್ಬಾ ಸಂಘಟನೆಗೆ ಸೇರಿದ್ದ ಎಂದು ವರದಿ ಹೇಳಿದೆ.