ರೈಲ್ವೆ ಹಳಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Update: 2017-09-10 22:58 IST
ಮಂಗಳೂರು, ಸೆ.10: ನಗರದ ಕಂಕನಾಡಿ ರೈಲ್ವೆ ಹಳಿಯಲ್ಲಿ ಅಪರಿಚಿತ ಪುರುಷನ ಮೃತದೇಹ ಪತ್ತೆಯಾಗಿದೆ.
ರೈಲು ಢಿಕ್ಕಿ ಹೊಡೆದು ಈ ಅಪರಿಚಿತ ವ್ಯಕ್ತಿ ಸಾವನ್ನಪ್ಪಿರಬಹುದೆಂದು ಶಂಕಿಸಲಾಗಿದೆ. ಇಂದು ಬೆಳಗ್ಗೆ ಮೃತದೇಹ ಪತ್ತೆಯಾಗಿದೆ. ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.