ರಸ್ತೆ ಅಪಘಾತ: ಬೈಕ್ ಸವಾರ ಮೃತ್ಯು
Update: 2017-09-10 23:05 IST
ಮಂಗಳೂರು, ಸೆ. 10: ಬಸ್ಸೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತನನ್ನು ದಿಲೀಪ್‌ದಾರ್ ತ್ರಿವೇದಿ ಎಂದು ಗುರುತಿಸಲಾಗಿದೆ. ದಿಲೀಪ್ ಅವರು ಆರಿಫ್ ಎಂಬವರನ್ನು ಹಿಂಬದಿಯಲ್ಲಿ ಕುಳ್ಳಿರಿಸಿಕೊಂಡು ಕೆಲಸದ ನಿಮಿತ್ತ ಬಿ.ಸಿ.ರೋಡ್ ಕಡೆಗೆ ತೆರಳಿ ಹಿಂದಿರುಗುತ್ತಿದ್ದರು. ಈ ಸಂದರ್ಭದಲ್ಲಿ ಬಿಕರ್ನಕಟ್ಟೆ ಕೈಕಂಬದಲ್ಲಿ ಒಳ ರಸ್ತೆಯಿಂದ ಮುಖ್ಯರಸ್ತೆಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಘಟನೆಯಿಂದ ದಿಲೀಪ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಸಂಚಾರಿ ಪೂರ್ವ ಠಾಣೆ ಪೊಲೀಸರು ತಿಳಿಸಿದ್ದಾರೆ.